ಬಾಲಕಿಗೆ ಕಿರುಕುಳ ಪ್ರಕರಣದ ಆರೋಪಿ ಕೋರ್ಟ್ ನ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ | ನಾನೇನೂ ತಪ್ಪು ಮಾಡಿಲ್ಲ ಎಂದು ಮನನೊಂದು ಆತ್ಮಹತ್ಯೆ

ಮಂಗಳೂರು : ಪೋಕ್ಸೊ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಆರೋಪಿಯೊಬ್ಬ ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಮೃತರನ್ನು ಕಿನ್ಯಾ ನಿವಾಸಿ ರವಿರಾಜ್‌ (31) ಎಂದು ಗುರುತಿಸಲಾಗಿದೆ.

ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆ ಆರೋಪಿ ರವಿರಾಜ್‌‌‌‌ ಅವರನ್ನು ಬಂಧಿಸಲಾಗಿತ್ತು. ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಮನನೊಂದು ಜಿಲ್ಲಾ ನ್ಯಾಯಾಲಯದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Leave A Reply

Your email address will not be published.