ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2021

News

ನಿಡ್ಲೆ | 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯರಿಂದ ಸ್ವಚ್ಛತಾ ಕಾರ್ಯ

ನಿಡ್ಲೆ : 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಶನಿವಾರದಂದು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಸದಸ್ಯರಿಂದ ನಿಡ್ಲೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಾರಾಯಣ ಎಂ…

News

ಕಬಕ:ಸ್ವಾತಂತ್ರ್ಯ ರಥಕ್ಕೆ ತಡೆಯೊಡ್ಡಿದವರನ್ನು ದೇಶದ್ರೋಹದ ಕೇಸು ದಾಖಲಿಸಿ ಜೈಲಿಗಟ್ಟಿ |ಯುವ ಮೋರ್ಚಾ ಕಾರ್ಯದರ್ಶಿ ಚಂದ್ರಹಾಸ ಈಶ್ವರಮಂಗಲ

ಕಬಕ ಗ್ರಾಮ ಪಂಚಾಯತ್ ನಲ್ಲಿ ಇಂದು ನಡೆದ ಸ್ವಾತಂತ್ರ್ಯ ರಥಕ್ಕೆ ತಡೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು, ದೇಶ ಸ್ವತಂತ್ರ್ಯದ ದಿನದಂದೇ ದೇಶದ್ರೋಹಕ್ಕೆ ಹೊರಟ ಎಸ್. ಡಿ.ಪಿ.ಐ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ ದೇಶ ದ್ರೋಹದ ಕೇಸು ದಾಖಲಿಸಿ ಜೈಲಿಗಟ್ಟಬೇಕು ಎಂದು…

News

ದುಗಲಡ್ಕ : ಕೂಟೇಲು ಶಕ್ತಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಸುಳ್ಯ : ಶಕ್ತಿ ಫ್ರೆಂಡ್ಸ್ ಕ್ಲಬ್ ( ರಿ)ಕೂಟೇಲು ದುಗಲಡ್ಕ ಇದರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಘದ ಗೌರವ ಸಲಹೆಗಾರರಾದ ಶಿವಕುಮಾರ್ ಕೂಟೇಲು ನೆರವೆರಿಸಿದರು.ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಊರಿನವರು ಭಾಗವಹಿಸಿದ್ದರು.

News

ಕಬಕ ಗ್ರಾಮ ಪಂಚಾಯತ್ ಸ್ವಾತಂತ್ರ್ಯೋತ್ಸವ ರಥವನ್ನು ತಡೆಹಿಡಿದು ಧಿಕ್ಕಾರ ಕೂಗಿದ ಎಸ್ ಡಿಪಿಐ ಕಾರ್ಯಕರ್ತರು | ವೀರ ಸಾವರ್ಕರ್ ಫೋಟೋ ತೆಗೆದು ಟಿಪ್ಪು ಫೋಟೋ ಹಾಕುವಂತೆ ಕೂಗು

ಎಸ್ ಡಿ.ಪಿ.ಐ ಕಾರ್ಯಕರ್ತರು ಸ್ವಾತಂತ್ರ್ಯೋತ್ಸವದ ರಥಕ್ಕೆ ತಡೆ ಒಡ್ಡಿದ ಘಟನೆ ಕಬಕ ಗ್ರಾಮ ಪಂಚಾಯತ್ ವಠಾರದಲ್ಲಿ ಇಂದು ನಡೆದಿದೆ. ಗ್ರಾಮ ಪಂಚಾಯತ್ ರಥಕ್ಕೆ ಪಂಚಾಯತ್ ವಠಾರದಲ್ಲಿ ಗ್ರಾ.ಪಂ. ಅಧ್ಯಕ್ಷರು ವಿನಯ್ ಕುಮಾರ್ ಕಲ್ಲೇಗ ಚಾಲನೆ ನೀಡಿ ಜೈಕಾರ ಹಾಕುತ್ತಿದ್ದಂತೆಯೇ…

News

ಅಜ್ಜಾವರ : ಮೇದಿನಡ್ಕದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಅಜ್ಜಾವರ, ಮೇದಿನಡ್ಕದಲಿ 75ನೇ ಸ್ವತಂತ್ರ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು, ಮೇದಿನಡ್ಕದ ಹಿರಿಯರಾದ ಶ್ರೀ ಸೆಲ್ವರತ್ನಂ ಧ್ವಜಾರೋಹಣ ನೆರವೇರಿಸಿದರು, ಈ ಸಂದರ್ಭದಲ್ಲಿ ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಶಿವಪಾಕ್ಯಂ, ಸುಳ್ಯ ರೆಪ್ಕೋ ಬ್ಯಾಂಕ್ ನಿರ್ದೇಶಕರಾದ ಶ್ರೀ ದಯಾಳ್ ಮೇದಿನಡ್ಕ,…

News

ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವದಂದು ನಡೆದ ದುರಂತ | ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ವಿದ್ಯುತ್ ಪ್ರವಹಿಸಿ, ಓರ್ವ ಬಾಲಕ ಸಾವು

ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದುರಂತವೊಂದು ನಡೆದಿದ್ದು, ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಮೃತಪಟ್ಟ ಘಟನೆ ತುಮಕೂರಿನ ಕೋರಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ನಡೆದಿದೆ. ಶಶಾಂಕ್ ( 16), ಪವನ್…

News

ಇನ್ನು ಮುಂದೆ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೂ ಪ್ರವೇಶಾವಕಾಶ | ಪ್ರಧಾನಿ ಮೋದಿ ಮಹತ್ವದ ಘೋಷಣೆ

ಸ್ವಾತಂತ್ರ್ಯೋತ್ಸವದ ಈ ಅಮೃತ ಘಳಿಗೆಯಲ್ಲಿ ಭಾರತವು ಲೈಂಗಿಕ ಸಮಾನತೆಯತ್ತ ಹೊಸ ಹೆಜ್ಜೆ ಇಡಲಿದೆ. ಇದಕ್ಕೆ ಮುನ್ನುಡಿಯಾಗಿ ಇಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಒಂದು ಮಹತ್ವದ ಘೋಷಣೆ ಮಾಡಿದ್ದಾರೆ. ಅದೇನೆಂದರೆ, ಈವರೆಗೆ…

News

75 ನೇ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯಲ್ಲಿ, ಕೆಂಪುಕೋಟೆಯಲ್ಲಿ 8 ನೇ ಬಾರಿಗೆ ಮೋದಿ ಭಾಷಣ | ಶತಮಾನೋತ್ಸವದ ಸಂಭ್ರಮಕ್ಕೆ ಯಾವ ದೇಶಕ್ಕೂ ಕಡಿಮೆ ಇಲ್ಲದಂತೆ ಬೆಳೆಯಬೇಕೆಂದು ಕರೆಕೊಟ್ಟ ಮೋದಿ

ನವದೆಹಲಿ: ಭಾರತದ ರಾಷ್ಟ್ರಭಕ್ತಿಗೆ ಇಂದು ಅಮೃತ ಘಳಿಗೆ. ರಾಷ್ಟ್ರಾದ್ಯಂತ ಇಂದು 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದು, ದೇಶವ್ಯಾಪಿ ರಾಷ್ಟ್ರಭಕ್ತಿ ಮೊಳಗುತ್ತಿದೆ. ಕೋವಿಡ್ ಮುನ್ನೆಚ್ಚರಿಕಾ ಕ್ರಮದೊಂದಿಗೆ ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮದ ಸರಳ ಆಚರಣೆ ನಡೆಯುತ್ತಿದ್ದರೂ ದೇಶಾದ್ಯಂತ ಸಂಭ್ರಮಕ್ಕೇನೂ ಮಿತಿ…

News

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 15 ರಂದು 75ನೇ ಸ್ವಾತಂತ್ರ್ಯ ಸಂಭ್ರಮದ “ಅಮೃತ ಮಹೋತ್ಸವ” ದಿನಾಚರಣೆ

ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 15 ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯನ್ನು, ಆ. 15 ರಂದು ವಾರಾಂತ್ಯ ಕರ್ಪ್ಯೂ ಮತ್ತು ಕೋವಿಡ್ 19 ಮಾರ್ಗಸೂಚಿಯಂತೆ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ…

News

ದಕ್ಷಿಣಕನ್ನಡದಲ್ಲಿ ಮೂರನೇ ಬಾರಿ ಅತೀ ಹೆಚ್ಚು ಕೊರೋನಾ ಪ್ರಕರಣ | ಶನಿವಾರ 7 ಜನ ಸಾವು

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಶನಿವಾರ 411 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ತಿಂಗಳಲ್ಲಿ ಮೂರನೇ ಬಾರಿಗೆ ರಾಜ್ಯದಲ್ಲಿ ಅತೀ ಹೆಚ್ಚು ಪ್ರಕರಣ ದ.ಕ. ಜಿಲ್ಲೆಯಲ್ಲಿ ದಾಖಲಾಗಿದೆ. ಈವರೆಗೆ ಒಟ್ಟು 1,497 ಮಂದಿ ಕೊರೊನಾದಿಂದ ಮೃತಪಟ್ಟರೆ,…