ಬೆಳ್ತಂಗಡಿ | ಲಾಯಿಲ ನಿವಾಸಿ ಮಾನಸಿಕ ಅಸ್ವಸ್ಥ ಆತ್ಮಹತ್ಯೆಗೆ ಶರಣು

Share the Article

ಬೆಳ್ತಂಗಡಿ: ಮಾನಸಿಕ ಅಸ್ವಸ್ಥರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲಿ ನಡೆದಿದೆ.

33 ವರ್ಷದ ವಸಂತ ಎಂಬುವವರು ಮೃತ ಪಟ್ಟವರು ಎಂದು ತಿಳಿದುಬಂದಿದೆ.

ಸುಮಾರು 6 ತಿಂಗಳಿನಿಂದ ಮಾನಸಿಕವಾಗಿ ವರ್ತಿಸುತ್ತಿದ್ದ ವಸಂತರವರು, ಆಗಸ್ಟ್ 30 ರಂದು ಹೆಂಡತಿ ಪೂರ್ಣಿಮಾ ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ ಮಧ್ಯಾಹ್ನ 3.00 ಗಂಟೆಗೆ ತಾನು ವಿಷ ಪದಾರ್ಥ ಸೇವಿಸಿರುವುದಾಗಿ ಕರೆ ಮೂಲಕ ಹೆಂಡತಿಗೆ ತಿಳಿಸಿದ್ದಾರೆ.

ಕೂಡಲೇ ಮನೆಗೆ ಧಾವಿಸಿದ ಪೂರ್ಣಿಮಾರವರು ಗಂಡನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗಿ ಪ್ರಥಮ ಚಿಕಿತ್ಸೆಯನ್ನು ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾ ವೆಸ್ಲಾಕ್ ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply