ಕುಡಿಪಾಡಿಯಲ್ಲಿ ‘ಆರೋಗ್ಯ ಮಿತ್ರ’ ಕೊರೊನ ಬಗ್ಗೆ ಜಾಗೃತಿ ಕಾರ್ಯಾಗಾರ

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ), ವಿವೇಕಾನಂದ ಆಯುರ್ವೇದ ಆಸ್ಪತ್ರೆ, ರೇಡಿಯೋ ಪಾಂಚಜನ್ಯ ಸಮುದಾಯ ಬಾನುಲಿ ೯೦.೮ಎಫ್.ಎಮ್. ವಿವೇಕಾನಂದ ಮಹಾವಿದ್ಯಾಲಯ, ಗ್ರಾಮ ವಿಕಾಸ ಸಮಿತಿ, ಐಕ್ಯುಎಸಿ ಘಟಕ, ರಾಷ್ಟ್ರೀಯ ಸೇವಾಯೋಜನೆ, ರೋವರ್ಸ್& ರೇಂಜರ್ಸ್, ರೆಡ್‌ಕ್ರಾಸ್ ಮತ್ತು ದ.ಕ.ಜಿ.ಪಂ.ಉ.ಹಿ. ಪ್ರಾಥಮಿಕ ಶಾಲೆ ಕುಡಿಪಾಡಿಯ ಶಾಲಾಭಿವೃದ್ಧಿ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ‘ಆರೋಗ್ಯ ಮಿತ್ರ’ ಕೊರೊನ ಬಗ್ಗೆ ಜಾಗೃತಿ ಕಾರ್ಯಾಗಾರವು ದ.ಕ.ಜಿ.ಪಂ.ಉ.ಹಿ. ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಮಂಗಳವಾರ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಡಿಪಾಡಿ ಗ್ರಾಮ ವಿಕಾಸ ಯೋಜನೆಯ ಅಧ್ಯಕ್ಷ ಸುಕುಮಾರ್ ಮಾತನಾಡಿ, ನಮ್ಮ ಗ್ರಾಮದ ವಿಕಾಸದಲ್ಲಿ ವಿವೇಕಾನಂದ ಮಹಾವಿದ್ಯಾಲಯ ತೊಡಗಿಸಿಕೊಂಡದ್ದು ತುಂಬಾ ಖುಷಿಯ ಸಂಗತಿ. ನಮ್ಮ ಗ್ರಾಮದ ಅಭಿವೃದ್ಧಿಗೆ ಇನ್ನಷ್ಟು ಸಹಕಾರ ನೀಡಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಂಯೋಜಕಿ ಡಾ. ವಿಜಯ ಸರಸ್ವತಿ, ಕೋರೊನಾ ಲಸಿಕೆ, ಮುನ್ನೆಚ್ಚರಿಕಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.

ಈ ಸಂದರ್ಭ ಕುಡಿಪಾಡಿ ಗ್ರಾಮವಿಕಾಸ ಸಮಿತಿಯ ಉಪಾಧ್ಯಕ್ಷ ರಾಮ ಜೋಯಿಸ, ಕುಡಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಖಾ ಭಟ್ರಪ್ಪಾಡಿ, ದ.ಕ.ಜಿ.ಪಂ.ಉ.ಹಿ. ಪ್ರಾಥಮಿಕ ಶಾಲೆ ಕುಡಿಪಾಡಿಯ ಮುಖ್ಯೋಪಾಧ್ಯಾಯಿನಿ ವಿಜಯ ಪಿ. ಗ್ರಾಮ ವಿಕಾಸ ಸಮಿತಿಯ ಸಂಯೋಜಕರಾದ ವಿವೇಕಾನಂದ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಮನಮೋಹನ್, ಅರ್ಥಶಾಸ್ತ್ರ ಉಪನ್ಯಾಸಕ ಡಾ. ವಿಷ್ಣು ಕುಮಾರ್ ಉಪಸ್ಥಿತರಿದ್ದರು.
ವಿವೇಕಾನಂದ ಮಾಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್ ಸ್ವಾಗತಿಸಿ, ಪ್ರಸ್ತಾವನೆಗೈದರು. ಕುಡಿಪಾಡಿ ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಮನ್ಮಥ ಶೆಟ್ಟಿ ವಂದಿಸಿದರು. ವಿವೇಕಾನಂದ ವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಎಸ್. ಕಾರ್ಯಕ್ರಮ ನಿರ್ವಹಿಸಿದರು.

Leave A Reply

Your email address will not be published.