ಬಂಟ್ವಾಳ | ಜೀಪ್ ಮತ್ತು ಸ್ಕೂಟರ್‌ ನಡುವೆ ಅಪಘಾತ, ಸ್ಕೂಟರ್ ಸವಾರ ಸಾವು

Share the Article

ಜೀಪ್ ಮತ್ತು ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನಾವೂರದಲ್ಲಿ ನಡೆದಿದೆ.

ನಾವೂರ ನಿವಾಸಿ ಅಬ್ಬಾಸ್ (60) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.

ಬಂಟ್ವಾಳ ತಾಲೂಕಿನ ಮಣಿಹಳ್ಳ ಸಮೀಪದ ನಾವೂರ ಮಸೀದಿ ಎದುರಿನಲ್ಲಿ ಜೀಪ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗಳಾಗಿದೆ. ಕೂಡಲೇ ಗಾಯಗೊಂಡ ಅಬ್ಬಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಜೇಶ್ ಅವರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply