ಹಾಸ್ಟೆಲ್‌ನಲ್ಲಿದ್ದ ಯುವತಿ ಮೇಲೆ ಅತ್ಯಾಚಾರ ಯತ್ನ | ಮೈಸೂರಿನಲ್ಲಿ ನಡೆಯಿತು ಮತ್ತೊಂದು ಹೀನ ಕೃತ್ಯ

ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಘಟನೆ ಮಾಸುವ ಮುನ್ನವೆ ಮತ್ತೊಂದು ಹೀನ ಕೃತ್ಯ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ನಾಯ್ಡು ನಗರದ ಪುಷ್ಪಾಶ್ರಮ ಚರ್ಚ್ ಸಮೀಪ ಹೋಲಿ ಕ್ರಾಸ್ ಸ್ಟಡಿ ಹೌಸ್ ಹಾಸ್ಟೆಲ್‌ನಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಸ್ಥಳಕ್ಲೆ ಡಿಸಿಪಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳದಿಂದ ಸ್ಥಳದಲ್ಲಿ ಪರಿಶೀಲನೆ ನಡೆದಿದೆ. ಸಿಸಿ ಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಸಂತ್ರಸ್ತೆಯನ್ನು ಕೆ.ಆರ್. ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು,ಎನ್.ಆರ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave A Reply

Your email address will not be published.