ಬಂಟ್ವಾಳ : ಕೆಂಪುಕಲ್ಲಿನ ಕೋರೆಗೆ ಬಿದ್ದು ಬಾಲಕ ಮೃತ್ಯು

Share the Article

ಕೆಂಪು ಕಲ್ಲಿನ ಕೋರೆಗೆ ಬಿದ್ದು 6 ನೇ ತರಗತಿ ವಿದ್ಯಾರ್ಥಿಯೊರ್ವ ಮೃತಪಟ್ಟ ಘಟನೆ ಬಂಟ್ವಾಳ ‌ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ನಡೆದಿದೆ.

ಸಾಧಿಕ್ ಎಂಬವರ ಪುತ್ರ ಸವಾದ್ (12) ಮೃತಪಟ್ಟ ಬಾಲಕ.
ಸ್ಥಳೀಯ ಮಕ್ಕಳು ಸೇರಿಕೊಂಡು ಆಟ ಆಡಲು ತೆರಳಿದ ವೇಳೆ ಓರ್ವ ಬಾಲಕ ಕಾಲು ಜಾರಿ ಕೋರೆ ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಆಟ ಆಡುತ್ತಿದ್ದ ಬಾಲಕ ಕಾಲು ಜಾರಿ ನೀರಿಗೆ ಬಿದ್ದ ಕೂಡಲೇ ಉಳಿದ ಮಕ್ಕಳು ಮನೆಯವರಿಗೆ ತಿಳಿಸಿದ್ದು ಕೂಡಲೇ ಸ್ಥಳಕ್ಕೆ ಬಂದು ನೀರಿನಲ್ಲಿ ಬಿದ್ದಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಿದ್ದರು,ಅದಾಗಲೇ ಬಾಲಕ ಮೃತಪಟ್ಟಿದ್ದ ಎನ್ನಲಾಗಿದೆ.

Leave A Reply