ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಪತ್ನಿ ವಿಜಯಾ ನಿಧನ

Share the Article

ಇತ್ತೀಚೆಗೆ ಬಿಜೆಪಿ ಸೇರಿರುವ ಕೊಳ್ಳೇಗಾಲ ಶಾಸಕ,ಮಾಜಿ ಸಚಿವ ಎನ್.ಮಹೇಶ್ ಅವರ ಪತ್ನಿ ವಿಜಯಾ (64) ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಾ ಅವರಿಗೆ ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ ಸಮಸ್ಯೆ ತೀವ್ರವಾಗಿ ಉಂಟಾಗಿತ್ತು. ಇದರಿಂದಾಗಿ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.30 ಸುಮಾರಿಗೆ ನಿಧನರಾದರು.

ಮಂಡ್ಯ ಅಪೆಕ್ಸ್ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿದ್ದ ವಿಜಯಾ ಅವರು ಮೂರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು.

ಅಂತ್ಯಸಂಸ್ಕಾರ ಬೆಂಗಳೂರಿನ ಕನಕಪುರದಲ್ಲಿರುವ ಕಾನ್ಸಿ ಫೌಂಡೇಷನ್‌ನಲ್ಲಿ ಇಂದು ಸಂಜೆ ನಡೆಯಲಿದೆ.

Leave A Reply