ದ.ಕ : ಪ್ರಮುಖ ದೇವಸ್ಥಾನಗಳ ದರ್ಶನ, ಪರಿಷ್ಕೃತ ಆದೇಶ ಪ್ರಕಟಿಸಿದ ಜಿಲ್ಲಾಡಳಿತ
ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು, ಈ ಕೆಳಗಿನಂತೆ ಆದೇಶ ಹೊರಡಿಸಲಾಗಿದೆ.
ಅವುಗಳು ಇಂತಿವೆ:
- ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ದೇವರ ದರ್ಶನ, ತೀರ್ಥಪ್ರಸಾದ, ಅನ್ನಸಂತರ್ಪಣೆಗೆ ಮುಂದಿನ ಆದೇಶದವರೆಗೆ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಸೇವೆಗಳಿಗೆ ಅವಕಾಶವಿರುವುದಿಲ್ಲ.
- ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಹಾಗೂ
ವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ. - ಶನಿವಾರ ಮತ್ತು ಭಾನುವಾರಗಳಂದು ಎಲ್ಲಾ ರೀತ್ಯಾ ಉತ್ಸವ / ಸೇವೆಗಳು ತೀರ್ಥ, ಪ್ರಸಾದ ಮುಡಿ ಸೇವೆ, ವಸತಿಗಳನ್ನು
ನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ. - ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ.
ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ – 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳು, ಜಿಲ್ಲಾ ವಿಪ್ಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.