ಸದಾ ಟೀಕೆ ಚಾಳಿ ಹೊಂದಿರುವ ಈತನಿಗೀಗ ಕಾಂಗ್ರೆಸ್ ಹಾಗೂ ಬಿಜೆಪಿಯೇ ಟಾರ್ಗೆಟ್ !!| ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸನ್ನು ಮೊದಲು ತೊಡೆದು ನಂತರ ಬಿಜೆಪಿಯನ್ನು ಸೋಲಿಸಬೇಕು ಎಂದ ನಟ ಚೇತನ್

ಸಮಾನತೆಯ ಬಗೆಗೆ ಟ್ವೀಟ್ ಮಾಡಿದ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ , ಜಾತಿ ರಹಿತ ಸಮಾಜ ನಿರ್ಮಾಣವಾಗಬೇಕು.ಸ್ವ-ಲಾಭಕ್ಕಾಗಿ ಯಾವುದೇ ಅಧಿಕಾರ ಸ್ವೀಕಾರ ಒಳಿತಲ್ಲ ಎಂದು ಅಭಿಪ್ರಾಯ ತಿಳಿಸಿದ್ದಾರೆ.

ಸಮಾಜದಲ್ಲಿ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡನ್ನು ಸೋಲಿಸಬೇಕು ಎಂದು ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕೋಸ್ಕರ ಕಾಂಗ್ರೆಸ್ ಪಕ್ಷವು ಏನನ್ನು ಬೇಕಾದರೂ ಮಾಡುತ್ತದೆ. ಬಿಜೆಪಿ ಪಕ್ಷವು ದ್ವೇಷದ ಸಿದ್ದಾಂತವನ್ನು ಹೊಂದಿದೆ. ನಾವು ಮೊದಲು ಬಿಜೆಪಿಯನ್ನು ತೊಡೆದು ಹಾಕಿದರೆ, ಕಾಂಗ್ರೆಸ್ ಅದರಿಂದ ಲಾಭ ಪಡೆದು ಇನ್ನಷ್ಟು ಬಲಗೊಳ್ಳುತ್ತದೆ. ಆದರೆ ಮೊದಲು ಕಾಂಗ್ರೆಸ್ಸನ್ನು ತೊಡೆದು ಹಾಕಿದರೆ, ಬಿಜೆಪಿಯ ಸಿದ್ದಾಂತವನ್ನು ನಮ್ಮ ಸಮಾನತೆಯ ಸಿದ್ಧಾಂತದಿಂದ ಧ್ವಂಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆಬಿ ಹೆಡ್ಗೆವಾರ್ ಅವರು 1925 ರಲ್ಲಿ ಆರ್‍ಎಸ್‍ಎಸ್ ಸ್ಥಾಪಿಸಿದರು. ಕಾಂಗ್ರೆಸ್ಸಿನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೆ ಇದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‍ಎಸ್‍ಎಸ್ ಎರಡಕ್ಕೂ ಲಾಭವಾಗುತ್ತದೆ. ಸಮಾನತೆಗಾಗಿ ಕಾಂಗ್ರೆಸ್ ಮತ್ತು ಸಂಘ, ಎರಡನ್ನೂ ಸೋಲಿಸಬೇಕು ಎಂದು ಹೇಳಿದ್ದಾರೆ.

ಈ ಮುನ್ನ ಸೆಪ್ಟೆಂಬರ್ 6ರಂದು ಕನಕದಾಸರು 16ನೇ ಶತಮಾನದಲ್ಲಿ ಜಾತಿ ರಹಿತ ಮತ್ತು ವರ್ಗರಹಿತ ಸಮಾಜದ ಕನಸು ಕಂಡವರು. ವೈಯಕ್ತಿಕ ಅಧಿಕಾರಕ್ಕಾಗಿ ಜಾತಿ ಗುರುತನ್ನು ಬಳಸುವ ಸ್ವ-ಸೇವಕ ರಾಜಕಾರಣಿಗಳು ಕನಕರನು ಹೈಜಾಕ್ ಮಾಡಲು ಬಿಡಬಾರದು. ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಡಿದ ಕನಕದಾಸರು ನಮ್ಮೆಲ್ಲರಿಗೂ ಸೇರಿದವರು ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದರು.

Leave A Reply

Your email address will not be published.