ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | 2021-22 ನೇ‌ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು , ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನ ನ್ಯಾಷನಲ್ ಸ್ಕಾಲರ್ಶಿಪ್( NSP) ವಿದ್ಯಾರ್ಥಿ ವೇತನ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅಲ್ಪಸಂಖ್ಯಾತ ಸಮುದಾಯದ 1ನೇ ತರಗತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗಿರುವ ಅಗತ್ಯ ದಾಖಲೆಗಳು :-

  • ವಿದ್ಯಾರ್ಥಿಯ ಆಧಾರ್ ಕಾರ್ಡ್.
  • ಪೋಷಕರ ಆಧಾರ್ ಕಾರ್ಡ್.
  • ಬ್ಯಾಂಕ್ ಪಾಸ್ ಪುಸ್ತಕ
  • ರೇಶನ್ ಕಾರ್ಡ್.
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ.
  • ಅಂಕ ಪಟ್ಟಿ / ಮಾರ್ಕ್ಸ್ ಕಾರ್ಡ್
  • ಶಾಲಾ ಶುಲ್ಕದ ರಶೀದಿ
  • ಪಾಸ್ ಪೋರ್ಟ್ ಅಳತೆಯ ಭಾವಚಿತ್ರ.
  • ಮೊಬೈಲ್ ಸಂಖ್ಯೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

FOR PREMATRIC SCHOLARSHIP : 15 NOVEMBER 2021

FOR POSTMATRIC SCHOLARSHIP : 30 NOVEMBER 2021

ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು https://Scholarships.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಸಲ್ಲಿಸಲು ಹಾಗು ಹೆಚ್ಚಿನ ಮಾಹಿತಿಗೆ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಶಾಲಾ-ಕಾಲೇಜು ಕಛೇರಿ ಸಂಪರ್ಕಿಸಬಹುದಾಗಿದೆ.

Leave A Reply

Your email address will not be published.