ಸೆ.27 ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ ರಾಜ್ಯ ರೈತ ಸಂಘಟನೆಗಳು|ರೈತರ ಬೆಳೆಗಳಿಗೆ ಬೆಂಬಲ ನೀಡುವಂತೆ ಪ್ರತಿಭಟನೆ
ಮೈಸೂರು: ರೈತರ ಬೆಳೆಗಳಿಗೆ ಬೆಂಬಲ ಸಿಗದ ಕಾರಣ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಇದೀಗ ಬೆಂಬಲ ವ್ಯಕ್ತಪಡಿಸಿದೆ.
ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.27ರಂದು ಸಂಯುಕ್ತ ಕಿಸಾನ್ ಮೋರ್ಚಾ ಬಂದ್ ಗೆ ಕರೆ ನೀಡಿದ್ದು, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ಸೂಚಿಸಿವೆ ಎಂದರು.
ದೇಶಾದ್ಯಂತ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರ ಬದುಕು ದುಸ್ಥರವಾಗಿದೆ. ಇನ್ನೊಂದೆಡೆ ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ, ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿವೆ, ಕಬ್ಬು ಬೆಳೆಗಾರರು ಸಂಕಷ್ಟಕ್ಕಿಡಾಗಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದು, ಹಲವು ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ ಎಂದು ಹೇಳಿದ್ದಾರೆ.