ಉಡುಪಿ | ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರಿಂದ ದಿಢೀರ್ ದಾಳಿ

Share the Article

ಉಡುಪಿಯ ಕಾರ್ಕಳ ತಾಲ್ಲೂಕಿನ ಕುಕ್ಕುಂದೂರಿನ ನಕ್ರೆ ಆನಂದಿ ಮೈದಾನದ ಬಳಿ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಏಕಾಏಕಿ ದಾಳಿ ನಡೆಸಿದ್ದಾರೆ.

ಕೊಠಡಿಯೊಂದರಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ನಡೆಯುತ್ತಿದ್ದಾಗ ದಿಢೀರ್ ದಾಳಿ ನಡೆದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ತೆರಳಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ನೂರಾರು ಹಿಂದೂಗಳನ್ನು ಕ್ರೈಸ್ತ ಮಿಷನರಿಗಳು ಮತಾಂತರ ಮಾಡಿವೆ ಎಂದು ಆರೋಪಿಸಲಾಗಿದೆ. ಕಳೆದ ಹತ್ತು ವರ್ಷಗಳಿಂದ ಮತಾಂತರ ಕೆಲಸದಲ್ಲಿ ನಿರತವಾಗಿರುವ ಪ್ರಗತಿ ಸೆಂಟರ್ ಸಂಪೂರ್ಣ ಅಕ್ರಮವಾಗಿದ್ದು, ಯಾವುದೇ ಅನುಮತಿ ಪಡೆಯದೇ ಇದನ್ನು ನಡೆಸಲಾಗುತ್ತಿದೆ ಎಂದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಆರೋಪಿಸಿದ್ದಾರೆ.

ಹಾಗೆಯೇ ಪ್ರಾರ್ಥನಾ ನಿರತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಬೆನಡಿಕ್ಟ್ ಎಂಬುವರು ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು, 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಸುನೀಲ್ ಎಂಬುವರು ಪ್ರತಿ ದೂರು ನೀಡಿದ್ದು ‌ಬೆನಡಿಕ್ಟ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply