ಕಾಣಿಯೂರಿನಲ್ಲಿ ಮುದ್ದುಕೃಷ್ಣ ವೇಷ ಸ್ಪರ್ಧೆ

Share the Article

ಕಾಣಿಯೂರು: ಶ್ರೀ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ 9 ನೇ ವರ್ಷದ ಮುದ್ದುಕೃಷ್ಣ ವೇಷ ಸ್ಪರ್ಧೆಯು ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.

ಮಧ್ಯಾಹ್ನ ಜನ್ಮಾಷ್ಟಮಿಯ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.ಮೆಸ್ಕಾಂ ಅಭಿಯಂತರಾದ ರಾಜೇಶ್ ರಾಧೆ-ಕೃಷ್ಣ ವೇಷಧಾರಿ ಪುಟಾಣಿಗಳಿಗೆ ಬಹುಮಾನ ವಿತರಿಸಿದರು.

ವೇದಿಕೆಯಲ್ಲಿ ‌ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಗೌರವಾಧ್ಯಕ್ಷ ಚಿದಾನಂದ ಉಪಾಧ್ಯಾಯ ಕಲ್ಪಡ,ಅಧ್ಯಕ್ಷ ವಾಸುದೇವ ‌ನಾಯ್ಕ್ ತೋಟ,ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಗೌರವಾಧ್ಯಕ್ಷ ಕೃಷ್ಣಪ್ರಸಾದ್ ಭಟ್ ಕಟ್ಟತ್ತಾರು,ಅಧ್ಯಕ್ಷ ಸುರೇಶ್ ಓಡಬಾಯಿ, ಉಪಾಧ್ಯಕ್ಷ ಜಯಂತ ಅಬೀರ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಪರಮೇಶ್ವರ ಅನಿಲ‌ ಕಾರ್ಯಕ್ರಮ ನಿರೂಪಿಸಿದರು.

Leave A Reply