ಕಾಣಿಯೂರು ಲಕ್ಷ್ಮೀನರಸಿಂಹ ಯುವಕ ಮಂಡಲದಿಂದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

ಕಾಣಿಯೂರು: 2020-21 ನೇ ಸಾಲಿನಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಇಲ್ಲಿನ 7 ನೇ ತರಗತಿ ಮತ್ತು ಸರಕಾರಿ ಪ್ರೌಢಶಾಲೆ ಕಾಣಿಯೂರು ಇಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕದೊಂದಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಅಭಿನಂದಿಸಲಾಯಿತು. ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ 34 ನೇ ವರ್ಷದ ಶ್ರೀ ಗಣೇಶೋತ್ಸವದಲ್ಲಿ ಎಸ್ಎಸ್ಎಲ್ ಸಿ ಯಲ್ಲಿ 597 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ಮಧುಶ್ರೀ ಅಬೀರ, 569 ಅಂಕ ಪಡೆದ ಕೃತಿ ಅರುವ ಮತ್ತು 7 ನೇ ತರಗತಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಹನಾ.ಎನ್ ಹಾಗೂ ಪುಣ್ಯಶ್ರೀ ಇವರನ್ನು ಸ್ಮರಣಿಕೆ,ನಗದು,ಪ್ರಶಸ್ತಿ ಮತ್ತು ಪುಸ್ತಕ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಮಡಳಿಯ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ,ಉಪಾಧ್ಯಕ್ಷರಾದ ಪುಟ್ಟಣ್ಣ ಗೌಡ ಮುಗರಂಜ, ವಿಶ್ವನಾಥ ಓಡಬಾಯಿ,ಲಕ್ಷ್ಮಣ ಗೌಡ ಮುಗರಂಜ ಯುವಕ ಮಂಡಲದ ಅಧ್ಯಕ್ಷ ಸುರೇಶ್ ಓಡಬಾಯಿ, ಕಾರ್ಯದರ್ಶಿ ವಿನಯ್ ಎಲುವೆ,ಉಪಾಧ್ಯಕ್ಷ ಜಯಂತ ಅಬೀರ, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ ಪೆರ್ಲೋಡಿ ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷ ಪರಮೇಶ್ವರ ಅನಿಲ ಕಾರ್ಯಕ್ರಮ ನಿರೂಪಿಸಿದರು.

Leave A Reply

Your email address will not be published.