ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ

ಬಂಟ್ವಾಳ, ಸೆ.14: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ ಆಗಿದ್ದಾರೆ.

 

ಬಂಟ್ವಾಳ ಪ್ರಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು.

ನೂತನ ಉಪಾಧ್ಯಕ್ಷರಾಗಿ ಯಾದವ್ ಅರ್ಗಬೈಲ್, ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ್ ವಿಶ್ವಕರ್ಮ, ಜೊತೆ ಕಾರ್ಯದರ್ಶಿಯಾಗಿ ಇಮ್ತಿಯಾಝ್ ಶಾ ತುಂಬೆ, ಕೋಶಾಧಿಕಾರಿಯಾಗಿ ವೆಂಕಟೇಶ್ ಬಂಟ್ವಾಳ ಅವರು ಆಯ್ಕೆಯಾದರು.

ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಅಲಿ ವಿಟ್ಲ ವರದಿ ವಾಚಿಸಿದರು. ಕೋಶಾಧಿಕಾರಿ ಯಾದವ್ ಅಗ್ರಬೈಲ್ ಲೆಕ್ಕಪತ್ರ ಮಂಡಿಸಿದರು. ಅಧ್ಯಕ್ಷ ಹರೀಶ್ ಮಾಂಬಾಂಡಿ ಮಾತನಾಡಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು.

Leave A Reply

Your email address will not be published.