ಮೂಡಬಿದ್ರೆ | ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಮಂಗಳೂರು: ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.


Ad Widget

ರಜತ್ ಸುರೇಶ್ ಪಟ್ಟದ್ ಆತ್ಮಹತ್ಯೆಗೆ ಯತ್ನಿಸಿದ್ದು , ಈತ ಸೆಕೆಂಡ್ ಪಿಯುಸಿ ಓದುತ್ತಿರುವ ವಿದ್ಯಾರ್ಥಿ.

ಬೆಳಗಾವಿ ಮೂಲದ ರಜತ್ ಮನೆಯವರಿಗೆ ಕರೆ ಮಾಡಿ ಬಳಿಕ,ಹಾಸ್ಟೆಲ್​ನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.


Ad Widget

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಜತ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು,ವಿದ್ಯಾರ್ಥಿ ರಜತ್ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.


Ad Widget

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿದ್ಯಾರ್ಥಿ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬುದು ಇನ್ನಷ್ಟೇ ತಿಳಿಯ ಬೇಕಿದೆ.

error: Content is protected !!
Scroll to Top
%d bloggers like this: