ಮಂಗಳೂರಿಗೂ ಎಂಟ್ರಿ ಕೊಟ್ಟ ನಿಫಾ ವೈರಸ್!!ಇಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕನಲ್ಲಿ ನಿಫಾ ಲಕ್ಷಣ | ವರದಿಗಾಗಿ ಸ್ಯಾಂಪಲ್ ಬೆಂಗಳೂರಿಗೆ ರವಾನೆ-ಜಿಲ್ಲಾಧಿಕಾರಿ ರಾಜೇಂದ್ರ ಕೆವಿ

ಇಲ್ಲಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ದಾಖಲಾದ ಯುವಕನಿಗೆ ನಿಫಾ ವೈರಸ್ ಲಕ್ಷಣಗಳಿದ್ದು,ಸದ್ಯ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿದ್ದು, ಆಸ್ಪತ್ರೆ ಮೂಲಗಳು ಆತನ ವರದಿಗಾಗಿ ಕಾಯುತ್ತಿದೆ ಎಂದು ತಿಳಿದು ಬಂದಿದೆ.

ಗೋವಾದ ಲ್ಯಾಬ್​ ಒಂದರಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಕಾರವಾರ ಮೂಲದ ಯುವಕನಿಗೆ ಜ್ವರ ಸೇರಿದಂತೆ ಕೆಲ ಲಕ್ಷಣಗಳು ಕಾಣಿಸಿಕೊಂಡಿತ್ತು.ಹೀಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ತನಗೆ ನಿಫಾದ ಆತಂಕವಿದೆ ಅಂತ ಹೇಳಿದ್ದ ಯುವಕ, ಟೆಸ್ಟ್ ಮಾಡಲು ಮನವಿ ಮಾಡಿಕೊಂಡಿದ್ದ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ, ಆಸ್ಪತ್ರೆಯಲ್ಲಿ ದಾಖಲಾಗಿರುವ ಯುವಕ ಆರ್​ಟಿಪಿಸಿಆರ್​ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್​ನಲ್ಲಿ ಕೆಲಸ ನಿರ್ವಹಿಸುತ್ತಿದ್ದೂ,ನಿಫಾ ಸ್ಯಾಂಪಲ್ ಟೆಸ್ಟ್ ಕೂಡ ಆತನ ಲ್ಯಾಬ್ ನಲ್ಲಿ ನಡೆಸಲಾಗಿತ್ತಿತ್ತು.ಕಾರವಾರಕ್ಕೆ ಬೈಕ್​ನಲ್ಲಿ ಮಳೆಯಲ್ಲಿ ಬಂದಿದ್ದ ಆತ, ಆ ಬಳಿಕ ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಆತನಿಗೆ ನಿಫಾ ಸೋಂಕಿನ ಶಂಕೆ ಇಲ್ಲದಿದ್ದರು ನಿರ್ಲಕ್ಷ್ಯ ಮಾಡಲು ಸಾಧ್ಯವಾಗದ ಕಾರಣ ಟೆಸ್ಟ್​ಗೆ ಕಳುಹಿಸಿದ್ದೇವೆ, ಮನೆಯವರನ್ನು ಕೂಡಾ ಇಸೋಲೇಷನ್ ಮಾಡಲಾಗಿದ್ದು, ವರದಿ ಬಂದ ಬಳಿಕ ದೃಢಪಡಿಸುತ್ತೇವೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.