ಆರು ವರ್ಷದ ಬಾಲಕಿಯ ಅತ್ಯಾಚಾರಗೈದು ಕೊಲೆ | ಆರೋಪಿಯ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ

ಹೈದರಾಬಾದ್ ನಲ್ಲಿ ಆರು ವರ್ಷದ ಬಾಲಕಿಯ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿ ಪಲ್ಲಕೊಂಡ ರಾಜು ಎಂಬಾತನ ಮೃತದೇಹ ರೈಲು ಹಳಿಯಲ್ಲಿ ಪತ್ತೆಯಾಗಿದೆ.

ಈ ಹಿಂದೆ ಆರೋಪಿಯ ಮಾಹಿತಿ ನೀಡಿದವರಿಗೆ ಹೈದರಾಬಾದ್ ಪೊಲೀಸರು 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು.

ಇಂತಹ ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು ಎಂದು ಸಚಿವರೊಬ್ಬರು ಹೇಳಿಕೆ ನೀಡಿದ ಬೆನ್ನಲ್ಲೇ ಮೃತದೇಹ ರೈಲು ಹಳಿಯಲ್ಲಿ ಪತ್ತೆಯಾಗಿದೆ.

ಸೆಪ್ಟೆಂಬರ್ 9ರಂದು ಆರು ವರ್ಷದ ಬಾಲಕಿ ಹೈದರಾಬಾದ್ ನ ಸಿಂಗರೇನಿ ಕಾಲೋನಿಯಿಂದ ನಾಪತ್ತೆಯಾಗಿದ್ದಳು. ಮರುದಿನ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಬಾಲಕಿಯ ಮೇಲೆ ಆರೋಪಿಯೊಬ್ಬ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದಾನೆ ಎಂಬುದು ತನಿಖೆ ವೇಳೆ ತಿಳಿದು ಬಂದಿತ್ತು.

ಇದೀಗ ಆರೋಪಿ ಎಂದು ಹೇಳಲಾದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.

Leave A Reply

Your email address will not be published.