ಬೆಳ್ತಂಗಡಿ:ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಕಂದಕಕ್ಕೆ ಬಿದ್ದ ಕಾರು, ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

Share the Article

ಬೆಳ್ತಂಗಡಿ: ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾರೊಂದು ಪ್ರಪಾತಕ್ಕೆ ಬಿದ್ದು ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ.

ಪ್ರಪಾತಕ್ಕೆ ಬಿದ್ದ ಕಾರ್ ನಲ್ಲಿ ಬಣಕಲ್ ಮೂಲದ ಜಗದೀಶ್ ಹಾಗೂ ಅವರ ಪತ್ನಿ ಇದ್ದರು ಎಂದು ತಿಳಿದು ಬಂದಿದೆ.

ಬಣಕಲ್ ನಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಉಜಿರೆ ಎಸ್.ಡಿ.ಎಂ.ಆಸ್ಪತ್ರೆಗೆ ರವಾನಿಸಲಾಗಿದೆ.

ಸದ್ಯ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿರುತ್ತಾರೆ.

Leave A Reply