ಕೇರಳ ಗಡಿಭಾಗದ ಮದ್ಯದಂಗಡಿಗಳ ನಿರ್ಬಂಧ ತೆರವು

ಮಂಗಳೂರು: ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ನಿರ್ಬಂಧ ತೆರವು ಕಡಿಮೆಯಾಗುತ್ತಿರುವ ಕಾರಣ ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಪುತ್ತೂರು, ಮಂಗಳೂರು, ಬಂಟ್ವಾಳ, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿನ 19 ಗ್ರಾಮಗಳ ಮದ್ಯದಂಗಡಿಗಳಿಗೆ ವಿಧಿಸಲಾಗಿದ್ದ ನಿರ್ಬ೦ಧವನ್ನು ತೆರವುಗೊಳಿಸಲಾಗಿದ್ದು ಸೆ.21ರಿಂದ ಮುಂದಿನ ಆದೇಶದವರೆಗೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಮದ್ಯ ಮಾರಾಟ ಮಳಿಗೆಯಲ್ಲಿನ ನೌಕರರು ಹಾಗೂ ಮದ್ಯ ಖರೀದಿಗೆ ಬರುವ ಗ್ರಾಹಕರುಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು, ಮದ್ಯದಂಗಡಿ ಸ್ಥಳದಲ್ಲಿ ಸ್ಯಾನಿಟೈಸರ್ ಇಡಲು ವ್ಯವಸ್ಥೆ ಮಾಡುವುದರೊಂದಿಗೆ ಗ್ರಾಹಕರು ಕಡ್ಡಾಯ ವಾಗಿ ಸ್ಯಾನಿಟೈಸರ್ ಬಳಸುವಂತೆ ನೋಡಿಕೊಳ್ಳಬೇಕು.ಈ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.

ಮದ್ಯದಂಗಡಿ ಮಳಿಗೆಯ ಅನುವಾಸುಗಳಲ್ಲಿ ಸಾರ್ವಜನಿಕರು ಗುಂಪುಗೂಡದಂತೆ ಕ್ರಮ ವಹಿಸುವುದು, ಕೇರಳ ರಾಜ್ಯದ ಗಡಿಭಾಗಗಳಿಂದ ಆರ್ ಟಿಪಿಸಿಆರ್ ವರದಿಯಿಲ್ಲದೇ ಸಕಾರಣವಿಲ್ಲದೇ ಅಕ್ರಮವಾಗಿ ಕೇರಳ ರಾಜ್ಯದ ವಾಸಿಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಿ, ಬಾರ್/ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಸೇವಿಸುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

Ad Widget

Ad Widget

Leave a Reply

error: Content is protected !!
Scroll to Top
%d bloggers like this: