ಬೆಂಗಳೂರಿನ ಘಟನೆ ಮಾಸುವ ಮುನ್ನವೇ ನಡೆಯಿತು ದಾವಣಗೆರೆಯಲ್ಲೊಂದು ಪ್ರಕರಣ!! | ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

Share the Article

ದಾವಣಗೆರೆ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ದಾವಣಗೆರೆಯ ಭರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ 35 ವರ್ಷದ ಕೃಷ್ಣಾ ನಾಯ್ಕ್, ಪತ್ನಿ ಸುಮಾ ಮತ್ತು ಆರು ವರ್ಷದ ಮಗು ಧ್ರುವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದು, ಅವರ ಅಕ್ರಂದನ ಮುಗಿಲು ಮುಟ್ಟಿದೆ.ಮಗು ಮತ್ತು ತನ್ನ ಪತ್ನಿಗೆ ವಿಷ ಕುಡಿಸಿ ಬಳಿಕ ಕೃಷ್ಣಾ ನಾಯ್ಕ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಎಂಆರ್ ಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೃಷ್ಣಾ ನಾಯ್ಕ್​ ಖಾಸಗಿ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನಾಗಿದ್ದ. ನಾಲ್ಕು ತಿಂಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಕುಟುಂಬ ಆರ್ಥಿಕ ಸಂಕಷ್ಟದಲ್ಲಿತ್ತು. ಇದಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ಮೂಡಿದೆ.ಇನ್ನೊಂದು ಪ್ರಕಾರವಾಗಿ,ಮನೆಯಲ್ಲಿ ಆರ್ಥಿಕ ಸ್ಥಿತಿ ಚೆನ್ನಾಗಿದ್ದರೂ ಸತತವಾಗಿ ಕಾಡುತ್ತಿರುವ ಆರೋಗ್ಯಸಮಸ್ಯೆಯಿಂದ ಬೇಸತ್ತ ಅವರು ಸಾವಿಗೆಮುಂದಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿಲಭಿಸಿದೆ. ಪತ್ನಿ ಮೂಲವ್ಯಾಧಿಯಿಂದ ಬಳಲುತ್ತಿದ್ದರು. ಲಾರಿ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೃಷ್ಣನಾಯ್ಕ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದರು. ಇದರಿಂದ ತೀವ್ರ ಮನನೊಂದಿದ್ದರು. ಕೃಷ್ಣ ನಾಯ್ಕ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಪತ್ನಿ ಹಾಗೂ ನ್ಯೂ ಡೆಲ್ಲಿ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಮಗ ಧ್ರುವ ಅವರ ಶವ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
Leave A Reply