ಚಾರ್ವಾಕದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಹುಟ್ಟೂರ ಸನ್ಮಾನ
ಕಾಣಿಯೂರು: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಸೆ 20ರಂದು ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಹುಟ್ಟೂರ ಸನ್ಮಾನ ನಡೆಯಿತು.
ಬೆಳಿಗ್ಗೆ ದೇವಾಲಯದಲ್ಲಿ ವೇದಮೂರ್ತಿ ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ತಂತ್ರಿಯವರ ನೇತೃತ್ವದಲ್ಲಿ ಶತರುದ್ರ ಪಾರಾಯಣ ಮತ್ತು 108 ಸೀಯಾಳಾಭಿಷೇಕ ನಡೆಯಿತು.
ಮುದುವದಿಂದ ಸ್ವಾಗತ ಮೆರವಣಿಗೆ ನಡೆದು, ಬಳಿಕ ನಡೆಯುವ ಸನ್ಮಾನ ಸಮಾರಂಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಹುಟ್ಟೂರ ಸನ್ಮಾನ ಸ್ವೀಕರಿಸಿದರು. ವೇ. ಮೂ. ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ತಂತ್ರಿಯವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾರ್ವಾಕ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ ಅಧ್ಯಕ್ಷತೆ ವಹಿಸಿದ್ದರು.
ಕಾಣಿಯೂರು ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ,ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲಕ್ಷ್ಮಣ ಕರಂದ್ಲಾಜೆ, ಅಮರಕಾಸ್ಪಾಡಿ ಜೋಡುದೈವಗಳ ಕ್ಷೇತ್ರದ ಆಡಳಿತದಾರರಾದ ಕುಸುಮಾಧರ ರೈ ಕಾಸ್ಪಾಡಿಗುತ್ತು, ಕಾಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ ,ಚಾರ್ವಾಕ ಸಿಎ ಬ್ಯಾಂಕ್ ಅಧ್ಯಕ್ಷ ಆನಂದ ಮೇಲ್ಮನೆ,ಚಾರ್ವಾಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಕೇನಾಜೆ ಮೊದಲಾದವರಿದ್ದರು.