ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ಕಠಿಣ ಲಾಕ್‌ಡೌನ್

ಕೊರೋನಾ ಸೋಂಕಿನ ಪ್ರಕರಣ ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ವಿಧಿಸುವುದಾಗಿ ಕೇರಳ ಸರ್ಕಾರ ಭಾನುವಾರ ಘೋಷಿಸಿದೆ.

ಸೋಂಕಿನ ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ನಿರ್ಬಂಧಗಳನ್ನು ಜಾರಿಗೊಳಿಸಲಾಗುವುದು ಮತ್ತು ಕೊರೋನಾ ಬಾಧಿತ ಸ್ಥಳಗಳಿಗೆ ವಾರಕ್ಕೊಮ್ಮೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಭೇಟಿ ನೀಡಲಿದೆ ಎಂದು ಮುಖ್ಯ ಕಾರ್ಯದರ್ಶಿ ವಿ.ಪಿ.ಜಾಯ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಕೊರೋನಾ ಇರುವ ಪ್ರದೇಶಗಳನ್ನು ವೆಬ್ ಸೈಟ್ ಗಳು ಮತ್ತು ಇತರ ಮಾಧ್ಯಮಗಳ ಮೂಲಕ ಪ್ರಚಾರ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ‘ಜಿಲ್ಲಾಧಿಕಾರಿಗಳು ಮಾರ್ಗಸೂಚಿಗಳ ಪ್ರಕಾರ ಸೂಕ್ಷ್ಮ ನಿಯಂತ್ರಿತ ವಲಯಗಳಿಗೆ ಮತ್ತಷ್ಟು ಸೂಚನೆ ನೀಡಬೇಕು ಮತ್ತು ಅದರಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಜಾರಿಗೊಳಿಸಬೇಕು’ ಎಂದು ಜಾಯ್ ತಿಳಿಸಿದ್ದಾರೆ.

Leave A Reply

Your email address will not be published.