ಡೀಮ್ಡ್ ಫಾರೆಸ್ಟ್‌ನಲ್ಲಿ ಮನೆ ಮಾಡಿದವರಿಗೆ,ಕೃಷಿ ಮಾಡಿದವರಿಗೆ ಸಿಹಿ ಸುದ್ದಿ ನೀಡಿದ ಬಿಜೆಪಿ ಸರಕಾರ
ಡೀಮ್ಡ್ ಫಾರೆಸ್ಟ್‌ನಲ್ಲಿ ಮನೆ ಮಾಡಿದವರಿಗೆ,ಕೃಷಿ ಮಾಡಿದವರಿಗೆ ಬಿಜೆಪಿ ಸರಕಾರ ಸಿಹಿ ಸುದ್ದಿ ನೀಡಿದೆ.
ರಾಜ್ಯದಲ್ಲಿನ ಡೀಮ್ಸ್ ಫಾರೆಸ್ಟ್ ಎಂದು ಗುರುತಿಸಲಾಗಿರುವ 9 ಲಕ್ಷ ಹೆಕ್ಟೇರ್ ಭೂಮಿಯ ಪೈಕಿ 6 ಲಕ್ಷ ಹೆಕ್ಟೇರ್ ಪ್ರದೇಶವನ್ನು ಕಂದಾಯ ಇಲಾಖೆಗೆ ವಾಪಸ್ ಕೊಡಲು ಅರಣ್ಯ ಇಲಾಖೆ ಸಮ್ಮತಿಸಿದ್ದು, ಈ ಭೂಮಿಯಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡು, ಸಾಗುವಳಿ ಮಾಡುವವರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಸೋಮವಾರ ವಿಧಾನಸಭೆ ಪ್ರಶೋತ್ತರ ಅವಧಿಯಲ್ಲಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, `ಈ ಹಿಂದೆ ಕೆಲ ಜಿಲ್ಲಾಧಿಕಾರಿಗಳು ಜನರ ಬೇಡಿಕೆ ಹಿನ್ನೆಲೆಯಲ್ಲಿ ತಮಗೆ ಇದರ ಹೊಣೆ ಬೇಡ ಎಂದು 9 ಲಕ್ಷ ಹೆಕ್ಟೇರ್ ಕಂದಾಯ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ಎಂದು ಘೋಷಿಸಿ ಈ ಬಗ್ಗೆ ಸುಪ್ರೀಂಕೋಟ್‌ರ್ಗೆ ಪ್ರಮಾಣಪತ್ರ ಸಲ್ಲಿಸಿದ್ದರು.
ಇವುಗಳ ಪೈಕಿ 6 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಪ್ರದೇಶವನ್ನು ಕಂದಾಯ ಇಲಾಖೆಗೆ ವಾಪಸ್ ಪಡೆಯಲು ಅರಣ್ಯ ಸಚಿವರ ಜತೆ ಚರ್ಚೆ ನಡೆಸಿದ್ದು, ಅವರು ಇದಕ್ಕೆ ಸ್ಪಂದಿಸಿದ್ದಾರೆ. ಹೀಗಾಗಿ ಸದ್ಯದಲ್ಲೇ ಈ ಭೂಮಿಯನ್ನು ಹಿಂಪಡೆದು ಸುಪ್ರೀಂಕೋಟ್‌ರ್ಗೆ ಪ್ರಮಾಣ ಪತ್ರ ಸಲ್ಲಿಸಲಾಗುವುದು. ಅಲ್ಲದೆ, ಈ ಜಾಗದಲ್ಲಿ ಮನೆ ನಿರ್ಮಿಸಿಕೊಂಡು ಮತ್ತು ಸಾಗುವಳಿ ಮಾಡುವವರಿಗೆ ಜಾಗ ನೀಡಲಾಗುವುದು ಎಂದರು.