ನೇತ್ರಾವದಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ | ಗುರುತು ಪತ್ತೆಗೆ ಪೊಲೀಸರ ಮನವಿ

ಮಂಗಳೂರು : ಬಂಟ್ವಾಳ ತಾಲೂಕಿನ ಸುಜೀರ್ ಎಂಬಲ್ಲಿನ ನೇತ್ರಾವತಿ ನದಿಯಲ್ಲಿ ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯ ಶೈತಲೀಕರಣ ಕೇಂದ್ರದಲ್ಲಿ ಇಡಲಾಗಿದೆ.

ನೇತ್ರಾವತಿ ನದಿಯಲ್ಲಿ ತೇಲಾಡುತ್ತಿದ್ದ ಮೃತದೇಹದ ಬಗ್ಗೆ ಪುದು ಗ್ರಾಮ ಪಂಚಾಯತ್ ಸದಸ್ಯ ಇಟ್ಬಾಲ್ ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.


Ad Widget

Ad Widget

Ad Widget

Ad Widget

Ad Widget

Ad Widget

ಮಾಹಿತಿ ಆಧಾರದ ಮೇಲೆ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ನದಿಯಿಂದ ಮೇಲೆತ್ತಿ ಮೃತಪಟ್ಟ ವ್ಯಕ್ತಿಯ ವಾರಸುದಾರರ ಪತ್ತೆಯಾಗದ ಹಿನ್ನೆಲೆಯಲ್ಲಿ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶೈತಲೀಕರಣ ಕೇಂದ್ರದಲ್ಲಿ ಇಡುವ ವ್ಯವಸ್ಥೆ ಮಾಡಿದ್ದಾರೆ.

ಮೃತದೇಹದ ವಾರಸುದಾರಿದ್ದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸುವಂತೆ ಎಸ್ಸೆ ಪ್ರಸನ್ನ ಕುಮಾರ್ ತಿಳಿಸಿದ್ದು ದೂರವಾಣಿ ಸಂಖ್ಯೆ: 08255235000 ಸಂಪರ್ಕ ಮಾಡಲು ತಿಳಿಸಿದ್ದಾರೆ.

error: Content is protected !!
Scroll to Top
%d bloggers like this: