ಇಂದಿನಿಂದ ನಾಲ್ಕು ದಿನ ಕರಾವಳಿ, ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ!!ಕರ್ನಾಟಕದ ಹಲವೆಡೆ ಹೈ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ.ವರುಣನ ಅಬ್ಬರದಿಂದ ಹಲವೆಡೆ ಹೈ ಅಲರ್ಟ್ ಘೋಷಿಸಲಾಗಿದೆ.

ಇಂದಿನಿಂದ ಸೆಪ್ಟೆಂಬರ್ 25ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.ಬೆಂಗಳೂರಿನಲ್ಲಿ ಕೂಡ ಸೆ. 25ರವರೆಗೂ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಳೆಯಿಂದ ಹಳದಿ ಅಲರ್ಟ್​ ಘೋಷಿಸಲಾಗಿದೆ. ಸೆಪ್ಟೆಂಬರ್ ಕೊನೆಯ ವಾರದವರೆಗೂ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ.

Ad Widget / / Ad Widget

ಉತ್ತರ ಭಾರತದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ರಾಜ್ಯಗಳಲ್ಲಿ ಪ್ರವಾಹದ ಆತಂಕ ಎದುರಾಗಿದೆ. ಗುಜರಾತ್​ನಲ್ಲಿ ಇಂದಿನಿಂದ 4 ದಿನ ಅಂದರೆ ಸೆ. 25ರವರೆಗೂ ಮಳೆ ಮುಂದುವರೆಯಲಿದೆ. ನೆರೆಯ ರಾಜ್ಯವಾದ ಕೇರಳದಲ್ಲಿ ಸೆ. 23ರಂದು ವಿಪರೀತ ಮಳೆಯಾಗಲಿದೆ.ಪಶ್ಚಿಮ ಬಂಗಾಳದಲ್ಲೂ ಮಳೆಯ ಅಬ್ಬರದಿಂದ ಪ್ರವಾಹದ ಭೀತಿ ಎದುರಾಗಿದೆ.

Leave a Reply

error: Content is protected !!
Scroll to Top
%d bloggers like this: