ಮಂಗಳೂರು | ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತ ಅನುಚಿತವಾಗಿ ವರ್ತಿಸುತ್ತಿದ್ದ ಮೂವರ ಬಂಧನ

Share the Article

ಮಂಗಳೂರು ಕೊಟ್ಟಾರ ಚೌಕಿ ಬಳಿಯ ಹೊಟೇಲೊಂದರ ಎದುರು ಬುಧವಾರ ರಾತ್ರಿ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಾ ಪರಸ್ಪರ ಕಿರುಚಾಡುವುದರಲ್ಲಿ ನಿರತರಾಗಿದ್ದ ಆರೋಪದ ಮೇಲೆ ಮೂವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅಜಿತ್ ಕುಮಾರ್, ನಿತಿನ್ ಕುಲಾಲ್, ಮತ್ತು ವಿನೋದ್ ಕುಲಾಲ್ ಎಂದು ಗುರುತಿಸಲಾಗಿದೆ.

ಈ ಮೂವರು ಬಿಯರ್ ಬಾಟಲ್ ಗಳನ್ನು ಹಿಡಿದುಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಪಾಯಕಾರಿಯಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave A Reply