ವೃತ್ತಿ ಮತ್ತು ಉದ್ಯೋಗ ಕೌಶಲ್ಯಗಳ ವೇಬಿನರ್

ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನುಪಡೆದು, ನಿರ್ದಿಷ್ಟ ಗುರಿ ಮತ್ತು ಧ್ಯೇಯವನ್ನು ತಲುಪಲು ಕಂಪ್ಯೂಟರ್ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ,ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆಯಬೇಕು. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಮೂಲಭೂತ ಸೌಕರ್ಯಗಳನ್ನು ಸದ್ಬಳಕೆ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿದೆಸೆಯಿಂದಲೇ ರೂಡಿಸಿಕೊಳ್ಳಬೇಕೆಂದು ಮೂಡಬಿದ್ರೆ ಧವಳಾ ಕಾಲೇಜಿನ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗ ಏರ್ಪಡಿಸಿದ ವೃತ್ತಿ ಮಾರ್ಗದರ್ಶನ ವೇಬಿನರ್ ನಲ್ಲಿ ಬಿಕಾಂ ಕಂಪ್ಯೂಟರ್ ಅಪ್ಲಿಕೇಶನ್ ವಿದ್ಯಾರ್ಥಿಗಳಿಗೆ ದೊರಕಬಹುದಾದ ಉದ್ಯೋಗ-ಅವಕಾಶಗಳ ಕೌಶಲ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಲೆಫ್ಟಿನೆಂಟ್ ಶ್ರೀ ಕೆ ಪ್ರವೀಣ್ ಕುಮಾರ್ ಅವರು ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ!ಸುದರ್ಶನ್ ಕುಮಾರ್ ರವರು ಎಲ್ಲರನ್ನೂ ಸ್ವಾಗತಿಸಿ ಸರಿಯಾದ ಶಿಕ್ಷಣ ಜೊತೆಗೆ ಕೌಶಲಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳುವ ಮೂಲಕ ವಿಪುಲ ಅವಕಾಶಗಳನ್ನು ಪಡೆಯಬಹುದು ಎಂದು ಪ್ರಾಸ್ತಾವಿಕವಾಗಿನುಡಿದರು.

ಈ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಶಿಕ್ಷಕರು-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 30 ವಿದ್ಯಾರ್ಥಿಗಳು ಭಾಗವಹಿದ್ದರು. ವಿಭಾಗದ ಸಂಯೋಜಕರಾದ ಶ್ರೀ ಪ್ರವೀಣ್ ಕುಲಕರ್ಣಿಯವರು ಅತಿಥಿಗಳನ್ನು ಪರಿಚಯಿಸಿ, ವಂದಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

Leave A Reply

Your email address will not be published.