ಕೊಯಿಲದಲ್ಲಿ ಗೋಶಾಲೆಗೆ 98 ಎಕರೆ ಪ್ರದೇಶ ಗುರುತು | ಅ. 1ರಂದು ಸ್ಥಳ ಪರಿಶೀಲನೆ- ಎಸ್.ಅಂಗಾರ

Share the Article

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲ-ರಾಮಕುಂಜ ಗ್ರಾಮದಲ್ಲಿ ಗೋಶಾಲೆ ನಿರ್ಮಾಣಕ್ಕೆ 98 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು ಅ. 1ರಂದು ಸ್ಥಳ ಪರಿಶೀಲಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ದ.ಕ.ಉಸ್ತುವಾರಿ ಸಚಿವ ಎಸ್.ಅಂಗಾರ ತಿಳಿಸಿದ್ದಾರೆ.

ಅವರು ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದ.ಕ.ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಪಾಲಿಕ್ಲಿನಿಕ್‌ನ ಉಪನಿರ್ದೇಶಕ ರಾಮಪ್ರಕಾಶ್ ಡಿ., ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ| ಟಿ.ಜಿ. ಪ್ರಸನ್ನ ಕುಮಾರ್, ಎಸ್‌ಕೆಡಿಆರ್‌ಡಿಪಿ ಯೋಜನಾಧಿಕಾರಿ ಲವಕುಮಾರ್ ಎಚ್. ಆರ್., ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಲತಾ,ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಳಿ ಉಪಸ್ಥಿತರಿದ್ದರು.

Leave A Reply