ಮಂಗಳೂರು:ಪಂಪ್ ವೆಲ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ!!ಅಪಘಾತದಿಂದ ಗಂಭೀರ ಗಾಯಗೊಂಡ ಬೈಕು ಸವಾರ ಸ್ಥಳದಲ್ಲೇ ಸಾವು

Share the Article

ಅಪರಿಚಿತ ವಾಹನವೊಂದು ಹಿಂದಿನಿಂದ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಗರದ ನಂತೂರು ಪಂಪ್ ವೆಲ್ ಹೆದ್ದಾರಿಯಲ್ಲಿ ನಡೆದಿದ್ದು, ಘಟನೆಯಿಂದ ಮೆಡಿಕಲ್ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಅಪಘಾತ ಎಸಗಿದ ವಾಹನ ಸ್ಥಳದಿಂದ ಪರಾರಿಯಾಗಿದೆ.

ಮೃತ ವಿದ್ಯಾರ್ಥಿ, ಬೈಕ್ ಸವಾರ ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ಉಗಾಲೆ (27) ಎನ್ನಲಾಗಿದೆ.

ವಿದ್ಯಾರ್ಥಿಯೂ ತನ್ನ ಪಲ್ಸರ್ ಬೈಕಿನಲ್ಲಿ
ನಂತೂರಿನಿಂದಾಗಿ ಪಂಪ್ ವೆಲ್ ನತ್ತ ಸಂಚರಿಸುತ್ತಿದ್ದಾಗ
ಯಾವುದೋ ವಾಹನ ಹಿಂದಿನಿಂದ ಢಿಕ್ಕಿಯಾಗಿ
ಪರಾರಿಯಾಗಿದ್ದು, ಡಿಕ್ಕಿ ಹೊಡೆದ ವಾಹನ ಕ್ಷಣಮಾತ್ರದಲ್ಲೇ ನಿಲ್ಲಿಸದೇ ಪರಾರಿಯಾಗಿದ್ದು, ಗಂಭೀರ ಗಾಯಗೊಂಡು ರಸ್ತೆ ಮಧ್ಯೆ ಬಿದ್ದಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಕದ್ರಿ ಸಂಚಾರಿ ಠಾಣೆಯ ಪೊಲೀಸರು
ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ
ದಾಖಲಿಸಿದ್ದಾರೆ. ಪೊಲೀಸರು ಡಿಕ್ಕಿಯಾಗಿ ಪರಾರಿಯಾದ ವಾಹನದ
ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.

Leave A Reply