ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

Share the Article

ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಮಂಗಳವಾರ ಘೋಷಣೆ ಮಾಡಿದೆ.

ಕರ್ನಾಟಕದ ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ.

ಅಕ್ಟೋಬರ್ 1 ರಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 2ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಅಕ್ಟೋಬರ್ 8ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ.

ನವೆಂಬರ್ 2ರಂದು ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಹಿರಿಯ ನಾಯಕ ಸಿ.ಎಂ ಉದಾಸಿ ನಿಧನದಿಂದ ಹಾನಗಲ್ ಕ್ಷೇತ್ರ ತೆರವಾಗಿತ್ತು ಇನ್ನು ಜೆಡಿಎಸ್ ಹಿರಿಯ ಶಾಸಕ ಎಂ.ಸಿ ಮುನಗೋಳಿ ನಿಧನದಿಂದ ಸಿಂಧಗಿ ಕ್ಷೇತ್ರ ತೆರವಾಗಿತ್ತು.

Leave A Reply