Day: September 29, 2021

ಕೋವಿಡ್ ನಂತರ ಆರ್.ಎಸ್.ಎಸ್.ಶಾಖೆಗಳ ಸಂಖ್ಯೆ ಹೆಚ್ಚಳ | ಸಂಘಕ್ಕೆ ಸೇರುವವರ ಸಂಖ್ಯೆ ಏರಿಕೆ

ಬೆಂಗಳೂರು : ಕೊವಿಡ್ ಸಂದರ್ಭದಲ್ಲಿ ಶಾಲೆಗಳನ್ನು ಮುಚ್ಚಿದ ಕಾರಣ ತಮ್ಮ ಶಾಖೆಗಳನ್ನು ಸೇರುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದು ಆರ್‌ಎಸ್‌ಎಸ್ ಹೇಳಿದೆ. ಹತ್ತರಿಂದ ಹದಿನಾರು ವರ್ಷಗಳ ನಡುವಿನ ಮಕ್ಕಳು ದೊಡ್ಡ ಸಂಖ್ಯೆಯಲ್ಲಿ ಶಾಖೆಗಳನ್ನು ಸೇರಿರುವುದರಿಂದ ಸದಸ್ಯರ ಪ್ರಮಾಣ ಎರಡು ವರ್ಷಗಳಲ್ಲಿ ಶೇ 5ರಷ್ಟು ಹೆಚ್ಚಾಗಿದೆ ಎಂದು ಆರ್ ಎಸ್ಎಸ್ ಹೇಳಿದೆ. ಲಾಕ್ ಡೌನ್ ನಂತರ ಶಾಖೆಗಳು ಉಚಿತ ಪಾಠಗಳನ್ನು ಆಯೋಜಿಸುವ ಜೊತೆಗೆ ಕ್ರೀಡೆಗಳಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟಿರುವುದರಿಂದ 2019ರಲ್ಲಿ ರಾಜ್ಯದಲ್ಲಿ4404ರಷ್ಟಿದ್ದಆರ್‌ಎಸ್‌ಎಸ್ ಶಾಖೆಗಳ ಸಂಖ್ಯೆ 2021ರಲ್ಲಿ4614ಕ್ಕೇರಿದೆ. ಉತ್ತರ ಕರ್ನಾಟಕದಲ್ಲಿ …

ಕೋವಿಡ್ ನಂತರ ಆರ್.ಎಸ್.ಎಸ್.ಶಾಖೆಗಳ ಸಂಖ್ಯೆ ಹೆಚ್ಚಳ | ಸಂಘಕ್ಕೆ ಸೇರುವವರ ಸಂಖ್ಯೆ ಏರಿಕೆ Read More »

ಕಡಬ : ಐತ್ತೂರಿನಲ್ಲಿ ಅಕ್ರಮ ಜಾನುವಾರು ಸಾಗಾಟ,ಜಾನುವಾರು-ಪಿಕಪ್ ವಶಕ್ಕೆ

ಕಡಬ: ಐತ್ತೂರು ಗ್ರಾಮದ ಸುಂಕದಕಟ್ಟೆ ಎಂಬಲ್ಲಿ ಸೆ.28ರ ರಾತ್ರಿ ಪಿಕಪ್ ವೊಂದರಲ್ಲಿ ಮೂರು ಹೋರಿಗಳನ್ನು ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಕಡಬ ಪೊಲೀಸರು ವಾಹನ ಹಾಗೂ ಪಿಕಪ್ ನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಪಿಕಪ್ ಹಾಗೂ ಅದರಲ್ಲಿ ತುಂಬಿಸಿದ್ದ ಹೋರಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾಂಗ್ರೆಸ್ ಆಡಳಿತದಲ್ಲಿ ತಾಲಿಬಾನಿ ಸಂಸ್ಕೃತಿ ಇತ್ತು -ನಳಿನ್

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್‌ನಲ್ಲಿ ಈಗ ಅತಂತ್ರ ಸ್ಥಿತಿಯಲ್ಲಿದ್ದಾರೆ. ಹೀಗಾಗಿ ಅವರು ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಅವಧಿಯಲ್ಲಿ ರಾಜ್ಯದಲ್ಲಿ ಹಿಂದು ಕಾರ್ಯಕರ್ತರ ಕೊಲೆ, ಸುಲಿಗೆ, ಗೋ ಹತ್ಯೆಗಳು ಅವ್ಯಾಹತವಾಗಿ ನಡೆದಿದ್ದು, ತಾಲಿಬಾನ್ ಸಂಸ್ಕೃತಿ ಅವರದ್ದೇ ಆಗಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದರು. ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆರ್‌ಎಸ್‌ಎಸ್ ತಾಲಿಬಾನ್ ಇದ್ದಂತೆ’ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ …

ಕಾಂಗ್ರೆಸ್ ಆಡಳಿತದಲ್ಲಿ ತಾಲಿಬಾನಿ ಸಂಸ್ಕೃತಿ ಇತ್ತು -ನಳಿನ್ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ‌ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ

ಸುಬ್ರಹ್ಮಣ್ಯ : ಕಾಲೇಜು ಜೀವನದ ಅನುಭವಗಳನ್ನು ಮುಂದಿನ ಬದುಕಿನಲ್ಲಿ ಅಳವಡಿಸಿಕೊಂಡು, ದೇಶಕ್ಕೆ ಮತ್ತು ಸಮಾಜಕ್ಕೆ‌ಸೇವೆಯನ್ನು ಸಲ್ಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ರಾಮ್ ಸುಳ್ಳಿ ನುಡಿದರು. ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ‌ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೋಡುವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋವಿಂದ ಎನ್ ಎಸ್ ಮಾತನಾಡಿ, ವಿದ್ಯಾರ್ಥಿ ಜೀವನದ ಅಂತಿಮ ಹಂತದಲ್ಲಿ, ಉದ್ಯೋಗ …

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ‌ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಕರಕುಶಲ ವಸ್ತುಗಳ ಪ್ರದರ್ಶನ

ಕಡಬ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಘಟಕ ಹಾಗೂ ಸಮಾಜಶಾಸ್ತ್ರ ವಿಭಾಗದ ವತಿಯಿಂದ ಸೆ.24ರಂದು ವಿದ್ಯಾರ್ಥಿಗಳು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು. ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಮನೋಹರ , ಉಪನ್ಯಾಸಕಿ ಆರತಿ ಕೆ. ಮಹಾವಿದ್ಯಾಲಯದ ಉಪನ್ಯಾಸಕ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ದತ್ತಪೀಠಕ್ಕೆ ಕೂಡಲೇ ಅರ್ಚಕರ ನೇಮಿಸಿ ತ್ರಿಕಾಲ ಪೂಜೆಗೆ ಅವಕಾಶ ಕಲ್ಪಿಸುವಂತೆ ವಿ.ಹಿಂ.ಪ.ಒತ್ತಾಯ

2018ರಲ್ಲಿ ಕಾಂಗ್ರೆಸ್ ಸರಕಾರ ದತ್ತಪೀಠದಲ್ಲಿ ಮುಜಾವರ್ ನೇಮಕಮಾಡಿ ಹೊರಡಿಸಿದ್ದ ಆದೇಶವನ್ನು ರದ್ದು ಮಾಡಿದ ಹೈಕೋರ್ಟ್ ತೀರ್ಪನ್ನು ಸ್ವಾಗತ ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ ಎಂದು ಮುಖಂಡ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ‌. ಜತೆಗೆ ಕೋರ್ಟ್ ಆದೇಶದಂತೆ ರಾಜ್ಯ ಸರಕಾರ ತಕ್ಷಣ ದತ್ತಪೀಠಕ್ಕೆ ಹಿಂದು ಆರ್ಚಕರನ್ನು ನೇಮಕ ಮಾಡಿ, ತ್ರಿಕಾಲ ಪೂಜೆ ನಡೆಸಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಬೇಕೆಂದೂ ಆಗ್ರಹಿಸಿದೆ.

ಶ್ರಾದ್ಧವನ್ನು ಮಾಡುವುದರ ಮಹತ್ವ !| ಶ್ರಾದ್ಧ ಕಾರ್ಯದ ಬಗ್ಗೆ ಇಲ್ಲಿದೆ ಮಾಹಿತಿ

‘ಶ್ರಾದ್ಧ’ ಎಂದು ಹೇಳಿದೊಡನೆ ಇಂದಿನ ವಿಜ್ಞಾನಯುಗದ ಯುವಪೀಳಿಗೆಯ ಮನಸ್ಸಿನಲ್ಲಿ ‘ಅಶಾಸ್ತ್ರೀಯ ಮತ್ತು ಅವಾಸ್ತವ ಕರ್ಮಕಾಂಡದ ಆಡಂಬರ’ ಎಂಬ ತಪ್ಪುಕಲ್ಪನೆಯು ಮೂಡುತ್ತದೆ. ಧರ್ಮಶಿಕ್ಷಣದ ಅಭಾವ, ಅಧ್ಯಾತ್ಮವನ್ನು ಅರ್ಥಮಾಡಿಕೊಳ್ಳುವಲ್ಲಿನ ಅನಾಸಕ್ತಿ, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ, ಹಿಂದೂ ವಿರೋಧಿ ಸಂಘಟನೆಗಳಿಂದ ಹಿಂದೂ ಧರ್ಮದ ರೂಢಿ-ಪರಂಪರೆಗಳ ಮೇಲೆ ಸತತವಾಗಿ ಆಗುತ್ತಿರುವ ದ್ವೇಷಪೂರ್ವಕ ಟೀಕೆ ಇತ್ಯಾದಿಗಳಿಂದ ಈ ಪರಿಣಾಮವಾಗಿದೆ. ಶ್ರಾದ್ಧದ ವಿಷಯದಲ್ಲಿ ಮುಂದಿನ ವಿಚಾರಸರಣಿಯು ಸಮಾಜದಲ್ಲಿ ಕಂಡುಬರುತ್ತದೆ. ಪೂಜೆ ಅರ್ಚನೆ, ಶ್ರಾದ್ಧಪಕ್ಷ ಮುಂತಾದವುಗಳ ಮೇಲೆ ವಿಶ್ವಾಸವನ್ನಿಡದ ಅಥವಾ ಸಮಾಜಕಾರ್ಯವೇ ಸರ್ವ ಶ್ರೇಷ್ಠವಾಗಿದೆ ಎಂದು ಹೇಳುವವರು …

ಶ್ರಾದ್ಧವನ್ನು ಮಾಡುವುದರ ಮಹತ್ವ !| ಶ್ರಾದ್ಧ ಕಾರ್ಯದ ಬಗ್ಗೆ ಇಲ್ಲಿದೆ ಮಾಹಿತಿ Read More »

ಕೊಳ್ತಿಗೆ : ಅನ್ಯಕೋಮಿನ ಯುವಕನ ಮನೆಯಲ್ಲಿ ಹಿಂದು ಯುವತಿ ಇರುವ ಗುಮಾನಿ | ಮನೆ ಮುಂದೆ ಜಮಾಯಿಸಿದ ಸಾರ್ವಜನಿಕರು

ಪುತ್ತೂರು : ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿ ಇದ್ದಾಳೆ ಎಂಬ ಗುಮಾನಿ ಹಿನ್ನೆಲೆಯಲ್ಲಿ ಯುವಕನ ಮನೆ ಮುಂದೆ ಸಾರ್ವಜನಿಕರು ಜಮಾಯಿಸಿದ ಘಟನೆ ಕೊಳ್ತಿಗೆ ಗ್ರಾಮದ ಕುಂಟಿಕಾನ ಎಂಬಲ್ಲಿ ಸೆ.29 ರಂದು ನಡೆದಿದೆ. ಸೆ.29 ರಂದು ಅನ್ಯಕೋಮಿನ ಯುವಕನೋರ್ವನ ಮನೆಯಲ್ಲಿ ಹಿಂದೂ ಯುವತಿಯೊಬ್ಬಳು ತಂಗಿದ್ದಾಳೆ ಎನ್ನುವ ಬಗ್ಗೆ ಮಾಹಿತಿ ದೊರೆತ ಸ್ಥಳೀಯರು ಮನೆ ಬಳಿ ತೆರಳಿ ನೋಡಿದಾಗ ಯುವತಿಯೊಬ್ಬಳಿದ್ದಳೆಂದು ಸಾರ್ವಜನಿಕರು ತಿಳಿಸಿದ್ದಾರೆ. ಈ ಬಗ್ಗೆ ತಿಳಿಯುತ್ತಿದಂತೆ ಅನ್ಯಕೋಮಿನ ಯುವಕನೋರ್ವನ ಮನೆ ಬಳಿ ಸಾರ್ವಜನಿಕರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗುವಿನ …

ಕೊಳ್ತಿಗೆ : ಅನ್ಯಕೋಮಿನ ಯುವಕನ ಮನೆಯಲ್ಲಿ ಹಿಂದು ಯುವತಿ ಇರುವ ಗುಮಾನಿ | ಮನೆ ಮುಂದೆ ಜಮಾಯಿಸಿದ ಸಾರ್ವಜನಿಕರು Read More »

ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ | ಹೈಕೋರ್ಟ್ ತೀರ್ಪು

ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿಗೆ ಕರ್ನಾಟಕ ಹೈಕೋರ್ಟ್ ಇಂದು ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. ಬೆಂಗಳೂರಿನ ಜಯಶ್ರೀ ಎಂಬಾಕೆಯ ಅತ್ಯಾಚಾರ ಹಾಗೂ ಕೆ ಪ್ರಕರಣದಲ್ಲಿ 2017 ರಲ್ಲಿ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವಂತೆ ಉಮೇಶ್ ರೆಡ್ಡಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಹೈಕೋರ್ಟ್‌ಗೆ ವರ್ಗಾಯಿಸಿತ್ತು. ಅಪರಾಧಿಯ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಇಂದು ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. ಆದಾಗ್ಯೂ ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸುವ …

ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ | ಹೈಕೋರ್ಟ್ ತೀರ್ಪು Read More »

ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ ಗೆ ಆರ್ಕಿಟೆಕ್ಚರ್ ವಿಭಾಗದಲ್ಲಿ 254 ನೇ ರ‍್ಯಾಂಕ್

ಪುತ್ತೂರು: ಆರ್ಕಿಟೆಕ್ಚರ್ ಇಂಜಿನಿಯರಿಂಗ್‌ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬಿಡುಗಡೆ ಮಾಡಿದ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೆಫಾಲಿಕಾ 254 ನೇ ರ‍್ಯಾಂಕ್ ಗಳಿಸಿದ್ದಾರೆ. ಇತ್ತೀಚೆಗೆ ನಡೆದ ನಾಟಾ ಫಲಿತಾಂಶವನ್ನು ಪರಿಗಣಿಸಿ ಈ ರ‍್ಯಾಂಕ್ ನ್ನು ನೀಡಲಾಗಿದೆ. ಈಕೆ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮತ್ತು ಶರ್ಮಿಳಾ ಗ್ಲಾಡೀಸ್ ದಂಪತಿಗಳ ಸುಪುತ್ರಿ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂಧಿಸಿದ್ದಾರೆ.

error: Content is protected !!
Scroll to Top