ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ‌ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭ

ಸುಬ್ರಹ್ಮಣ್ಯ : ಕಾಲೇಜು ಜೀವನದ ಅನುಭವಗಳನ್ನು ಮುಂದಿನ ಬದುಕಿನಲ್ಲಿ ಅಳವಡಿಸಿಕೊಂಡು, ದೇಶಕ್ಕೆ ಮತ್ತು ಸಮಾಜಕ್ಕೆ‌ಸೇವೆಯನ್ನು ಸಲ್ಲಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ರಾಮ್ ಸುಳ್ಳಿ ನುಡಿದರು.

ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ‌ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೋಡುವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋವಿಂದ ಎನ್ ಎಸ್ ಮಾತನಾಡಿ, ವಿದ್ಯಾರ್ಥಿ ಜೀವನದ ಅಂತಿಮ ಹಂತದಲ್ಲಿ, ಉದ್ಯೋಗ ಕೌಶಲ್ಯ ಮತ್ತು ನಾಯಕತ್ವವನ್ನು ಪಡೆದುಕೊಂಡಲ್ಲಿ, ಅವನು ಯಶಸ್ಸನ್ನು ಗಳಿಸಲು ಸಾಧ್ಯ. ಅಂತಹ ಕೌಶಲ್ಯವನ್ನು ಸಮಾಜದ ಒಳಿತಿಗಾಗಿ ಉಪಯೋಗಿಸಬೇಕು ಎಂದು ಹೇಳಿದರು.
ಐಕ್ಯೂಎಸಿ‌ ಘಟಕದ ಸಂಯೋಜಕರಾದ ಡಾ ಪ್ರಸಾದ ಎನ್., ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಮನೋಹರ್, ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ವಿನ್ಯಾಸ್ ಎಚ್. ವಿಧ್ಯಾರ್ಥಿಗಳಿಗೆ ಶುಭಹಾರೈಸಿದರು. ವಿದ್ಯಾರ್ಥಿಗಳು ತಮ್ಮ ಸವಿನೆನಪುಗಳನ್ನು ಹಂಚಿಕೊಂಡರು.
ಅಂತಿಮ ಪದವಿಯ ಶೈಕ್ಷಣಿಕ ಸಲಹೆಗಾರರಾದ ಶ್ರೀಮತಿ ಲತಾ ಬಿ. ಟಿ., ಶ್ರೀಮತಿ ಶ್ರೀಲತಾ ಕಮಿಲ, ಶ್ರೀ ರಮಾನಾಥ್ ಎ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ವಿಭಾಗದ ಉಪನ್ಯಾಸಕಿ ಶ್ರೀಮತಿ ಸುಮಿತ್ರಾ ಸ್ವಾಗತಿಸಿ, ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಶ್ರೀಮತಿ ವನಿತಾ ಕೆ. ಎನ್. ವಂದಿಸಿದರು. ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಕುಮಾರ್ ಶೇಣಿ ಕಾರ್ಯಕ್ರಮ ನಿರೂಪಿಸಿದರು.

Leave A Reply

Your email address will not be published.