ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಕರಕುಶಲ ವಸ್ತುಗಳ ಪ್ರದರ್ಶನ

ಕಡಬ : ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಘಟಕ ಹಾಗೂ ಸಮಾಜಶಾಸ್ತ್ರ ವಿಭಾಗದ ವತಿಯಿಂದ ಸೆ.24ರಂದು ವಿದ್ಯಾರ್ಥಿಗಳು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು.

 

ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಗೋವಿಂದ ಎನ್.ಎಸ್. ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಮನೋಹರ , ಉಪನ್ಯಾಸಕಿ ಆರತಿ ಕೆ. ಮಹಾವಿದ್ಯಾಲಯದ ಉಪನ್ಯಾಸಕ ವರ್ಗದವರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave A Reply

Your email address will not be published.