ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ | ಹೈಕೋರ್ಟ್ ತೀರ್ಪು

ಬೆಂಗಳೂರು: ವಿಕೃತಕಾಮಿ ಉಮೇಶ್ ರೆಡ್ಡಿಗೆ ಕರ್ನಾಟಕ ಹೈಕೋರ್ಟ್ ಇಂದು ಗಲ್ಲು ಶಿಕ್ಷೆ ಖಾಯಂಗೊಳಿಸಿದೆ. ಬೆಂಗಳೂರಿನ ಜಯಶ್ರೀ ಎಂಬಾಕೆಯ ಅತ್ಯಾಚಾರ ಹಾಗೂ ಕೆ ಪ್ರಕರಣದಲ್ಲಿ 2017 ರಲ್ಲಿ ಸೆಷನ್ಸ್ ಕೋರ್ಟ್ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ನ್ಯಾಯಾಲಯ ಎತ್ತಿಹಿಡಿದಿದೆ.

 

ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸುವಂತೆ ಉಮೇಶ್ ರೆಡ್ಡಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಹೈಕೋರ್ಟ್‌ಗೆ ವರ್ಗಾಯಿಸಿತ್ತು. ಅಪರಾಧಿಯ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಇಂದು ಗಲ್ಲು ಶಿಕ್ಷೆ ಖಾಯಂಗೊಳಿಸಿದೆ.

ಆದಾಗ್ಯೂ ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸುವ ಅವಕಾಶವಿರುವುದರಿಂದ, ಇನ್ನೂ 6 ವಾರಗಳ ಕಾಲ ಈ ಶಿಕ್ಷೆಯನ್ನು ಜಾರಿಗೊಳಿಸುವ ಹಾಗಿಲ್ಲ ಎನ್ನಲಾಗಿದೆ.

Leave A Reply

Your email address will not be published.