ಕನ್ನಡ ಚಿತ್ರನಟಿ ಸೌಜನ್ಯಾ ನೇಣು ಬಿಗಿದು ಆತ್ಮಹತ್ಯೆ | ಧಾರಾವಾಹಿಗಳಲ್ಲೂ ಅಭಿನಯಿಸಿದ್ದ ಸೌಜನ್ಯಾ

Share the Article

ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ನಟಿ ಸೌಜನ್ಯಾ (25) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ಸೌಜನ್ಯ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಅಪಾರ್ಟ್‍ಮೆಂಟ್‍ನಲ್ಲಿ ತನ್ನ ಫ್ರೆಂಡ್ ವಿವೇಕ್ ಜೊತೆ ವಾಸವಾಗಿದ್ದರು. ವಿವೇಕ್‍ನನ್ನು ಊಟ ತರುವಂತೆ ಕಳುಹಿಸಿ ನಂತರ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ನಟಿ ಸೌಜನ್ಯಾ ಅವರು ಚೌಕಟ್ಟು ಫನ್, ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave A Reply