ಮದುವೆಯಾಗಲು ನಿರಾಕರಿಸಿದ ಪ್ರಿಯಕರ ,ಯುವ ಕಲಾವಿದೆ ನೇಣು ಬಿಗಿದು ಆತ್ಮಹತ್ಯೆ

Share the Article

ಪ್ರಿಯಕರ ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಕೈ ಮನನೊಂದು ತೆಲುಗು ಚಿತ್ರರಂಗದ ಸಹ ಕಲಾವಿದೆ ಅನುರಾಧ ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.

ಸಾಕಷ್ಟು ಸಿನಿಮಾಗಳಲ್ಲಿ ಸಹ ಕಲಾವಿದೆಯಾಗಿ ನಟಿಸಿದ್ದ ಅನುರಾಧ, ಕಿರಣ್ ಎಂಬುವರನ್ನು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದಳು. ಆತನನ್ನೆ ಮದುವೆಯಾಗಬೇಕೆಂದು ಬಯಸಿದ್ದಳು.
ಆದರೆ ಕಿರಣ್ ಮದುವೆಯಾಗಲು ನಿರಾಕರಿಸಿದ್ದರಿಂದ ಮನನೊಂದಿದ್ದ ಅನುರಾಧ ಹೈದರಾಬಾದ್‍ನ ಬಂಜಾರಾ ಹಿಲ್ಸ್ ನಲ್ಲಿರುವ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ.

ಅನುರಾಧ ನಾಲ್ಕು ದಿನಗಳಿಂದ ಮನೆಯಿಂದ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಿ ನೋಡಿದಾಗ ಈಕೆಯ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಲ್ಲಿಂಗ್ ಫ್ಯಾನ್‍ಗೆ ನೇತಾಡುತ್ತಿತ್ತು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹೈದರಾಬಾದ್ ನ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

Leave A Reply

Your email address will not be published.