ಡಿಪ್ಲೊಮಾ ಕೋರ್ಸ್ ಇನ್ನು ಮುಂದೆ ಪಿಯುಸಿಗೆ ಸಮಾನ | ಅತಂತ್ರ ಸ್ಥಿತಿಯಲ್ಲಿದ್ದ ಡಿಪ್ಲೋಮಾದಾರರ ಮೊಗದಲ್ಲಿ ಸಂತಸ

ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆ ನಡೆಸುವ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿ.ಯು.ಸಿ ವಿದ್ಯಾರ್ಹತೆಗೆ ತತ್ಸಮಾನವೆಂದು ಪರಿಗಣಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ಒದಗಿಬಂದಿದೆ. ಈ ಮೂಲಕ ಅತಂತ್ರ ಸ್ಥಿತಿಯಲ್ಲಿದ್ದ ಡಿಪ್ಲೋಮಾದಾರರು ಇನ್ನು ಮುಂದೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಮ್ಮನ್ನು ತಾವು ಒಡ್ಡಿಕೊಳ್ಳಲು ಅರ್ಹರಾಗಿರುತ್ತಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶರಣಪ್ಪ ಅವರು ಈ ಸಂಬಂಧ ನಡವಳಿ ಹೊರಡಿಸಿದ್ದು, ಮೂರು ವರ್ಷಗಳ ಡಿಪ್ಲೊಮಾ ವಿದ್ಯಾರ್ಹತೆಯನ್ನು ಪಿಯುಸಿ ವಿದ್ಯಾರ್ಹತೆಗೆ ತತ್ಸಮಾನವೇ ಎಂಬ ವಿಷಯವನ್ನು ನಿರ್ಧರಿಸುವ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ಆದೇಶಿಸಲಾಯಿತು. ಸಮಿತಿಯು ವಿಸ್ತಾರವಾಗಿ ಚರ್ಚಿ, ಸಾಧಕ-ಬಾಧಕಗನ್ನು ಪರಿಗಣಿಸಿ, ಅಭಿಪ್ರಾಯದೊಂದಿಗೆ 2021ರ ಮಾರ್ಚ್ 31ರಂದು ಸರ್ಕಾರಕ್ಕೆ ಸಭಾ ನಡವಳಿಯೊಂದಿಗೆ ವರದಿಯನ್ನು ಸಲ್ಲಿಸಲಾಗಿದೆ.

ಈ ವರದಿಯನ್ನು ಆಧರಿಸಿ, ನೇರ ನೇಮಕಾತಿ, ಅನುಕಂಪದ ಆಧಾರದ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯುಲು ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಶಿಕ್ಷಣವನ್ನು ಪಿ.ಯು.ಸಿ ಗೆ ತತ್ಸಮಾನವೆಂದು ಇನ್ನು ಮುಂದೆ ಪರಿಗಣಿಸುವುದು. 2015ಕ್ಕಿಂತ ಹಿಂದಿನ ವರ್ಷಗಳಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ಮೂರು ವರ್ಷಗಳ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಕೆಪಿಎಸ್ಸಿಯಿಂದ ನಡೆಸುವ ಇಲಾಖಾ ಪರೀಕ್ಷೆಗಳ ಜೊತೆಗೆ, ಕನ್ನಡ ಭಾಷಾ ಪರೀಕ್ಷೆಯನ್ನು ತೇರ್ಗಡೆ ಹೊಂದಬೇಕು ಎಂದು ನಿರ್ಧಾರಕ್ಕೆ ಬರಲಾಗಿದೆ.

Leave A Reply

Your email address will not be published.