ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1 ಸಾವಿರದ 242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಇದೇ 7ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಡೆಸುವ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಸಂಪೂರ್ಣ ಪಾರದರ್ಶಕತೆಯೊಂದಿಗೆ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಯಲ್ಲಿ ಪಡೆದ ಅಂಕಗಳೇ ನೇಮಕಾತಿಗೆ ಆಧಾರವಾಗಲಿದ್ದು, ಸಂದರ್ಶನ ಇರುವುದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಡಿಸೆಂಬರ್ ನಲ್ಲಿ ಈ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ತೇರ್ಗಡೆ ಆಗುವುದು ಕಡ್ಡಾಯವಾಗಿದೆ. ಈ ವಿಷಯಗಳಲ್ಲಿ ಮಾತ್ರ ವಿವರಣಾತ್ಮಕ ಉತ್ತರಗಳನ್ನು ಬರೆಯಬೇಕಾಗುತ್ತದೆ. ಉಳಿದ ವಿಷಯಗಳಲ್ಲಿ ಬಹು ಆಯ್ಕೆ ಪ್ರಶ್ನೆಗಳಿರಲಿವೆ ಎಂದು ಸಚಿವರು ತಿಳಿಸಿದರು.

Leave A Reply

Your email address will not be published.