ಬೆಳ್ತಂಗಡಿ | ಗರ್ಡಾಡಿ ಭಾರಿ ಮಳೆಗೆ ಮನೆಯ ಕಾಂಪೌಂಡ್ ಕುಸಿತ, ಅಂಗಡಿಗಳಿಗೆ ನುಗ್ಗಿದ ನೀರು

ಇಂದು ಸಂಜೆ ಸುರಿದ ಭಾರಿ ಮಳೆಗೆ ಮನೆಯೊಂದರ ಕಾಂಪೌಂಡ್ ಕುಸಿದು ಸುತ್ತಮುತ್ತಲಿನ ಅಂಗಡಿಗಳಿಗೆಲ್ಲಾ ನೀರು ನುಗ್ಗಿದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿಯಲ್ಲಿ ನಡೆದಿದೆ.

ಗರ್ಡಾಡಿ ನಿವಾಸಿ ಸುರೇಶ್ ಮೊಯ್ಲಿ ಇವರ ಮನೆಯ ಕಂಪೌಂಡ್ ಮಳೆ ನೀರಿನ ರಭಸಕ್ಕೆ ಕುಸಿದುಬಿದ್ದಿದೆ. ಇದರ ಪರಿಣಾಮವಾಗಿ ಮನೆಯ ಪಕ್ಕದ ಅಂಗಡಿಗಳಿಗೆ ನೀರು ನುಗ್ಗಿ ಅಂಗಡಿಗಳ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.