ಕುಕ್ಕೆ ಶ್ರೀ ಸುಬ್ರಹ್ಮಣ್ಯ ,ಧರ್ಮಸ್ಥಳ ಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ

ಕಡಬ : ಭಾರತೀಯ ಜನತಾ ಪಾರ್ಟಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅ.6 ರಂದು ಕಡಬ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಶ್ರೀ ಕ್ಷೇತ್ರ ಧರ್ಮಸ್ಥಳ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ

ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ ಅಧ್ಯಕ್ಷರಾದ ಹೆಚ್.ಸಿ.ತಮ್ಮೇಶ್ ಗೌಡರು ಈ ಸಂದರ್ಭದಲ್ಲಿ ಜೊತೆಗಿದ್ದರು.


Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವಸ್ಥಾನದ ಆಡಳಿತ ಕಛೇರಿಯಲ್ಲಿ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಅವರು ವಿಜಯೇಂದ್ರ ಅವರನ್ನು ಬರಮಾಡಿಕೊಂಡರು. ಬಳಿಕ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದು ದೇವರಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಯ್ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ, ಶೋಭಾ ಗಿರಿಧರ್, ವನಜಾ ಭಟ್ ಮತ್ತಿತರರು ಸ್ವಾಗತಿಸಿದರು.

ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಲಲಿತಾ ಗುಂಡಡ್ಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಮಾದವ ಚಾಂತಾಳ ಕಿಶೋರ್ ಕುಮಾರ್ ಕೂಜುಗೋಡು, ರಾಜೇಶ್ ಎನ್ ಎಸ್, ದಿನೇಶ್ ಸಂಪ್ಯಾಡಿ, ಶ್ರೀ ಕುಮಾರ್, ಅಚ್ಚುತ ಗುತ್ತಿಗಾರು, ರಾಜೇಶ್ ಕುದುರೆಮಜಲು, ಮನೋಜ್ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಭಟ್, ಮೋನಪ್ಪ ಮಾನಾಡು, ಗಿರೀಶ್ ಆಚಾರ್ಯ, ಎಚ್ ಎಲ್ ವೆಂಕಟೇಶ್, ಗಿರಿಧರ ಸ್ಕಂದ, ದೀಪಕ್ ರೈ, ಗ್ರಾ.ಪಂ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!
Scroll to Top
%d bloggers like this: