ವಿಧಾನ ಸಭೆಗೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದೆ.

 

ಸಿಂದಗಿಯಿಂದ ರಮೇಶ್ ಭೂಸನೂರು ಮತ್ತು ಹಾನಗಲ್ ಕ್ಷೇತ್ರದಿಂದ ಶಿವರಾಜ್ ಸಜ್ಜನರ್ ಅವರು ಅಭ್ಯರ್ಥಿಗಳಾಗಿರುವರು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಸಿಂಗ್ ಅವರು ತಿಳಿಸಿದ್ದಾರೆ.

ಎರಡೂ ವಿಧಾನಸಭೆ ಕ್ಷೇತ್ರಗಳಿಗೆ ಅ.30ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ.

Leave A Reply

Your email address will not be published.