ನಿವೇಶನಕ್ಕೆ ಅರ್ಜಿ ಕೊಡಲು ಬಂದ ಮಹಿಳೆಗೆ ಕಿರುಕುಳ | ಗ್ರಾ.ಪಂ.ಸದಸ್ಯನ ವಿರುದ್ಧ ಪ್ರಕರಣ ದಾಖಲು

Share the Article

ಮಹಿಳೆಯೋರ್ವರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮುನ್ನೂರು ಗ್ರಾಪಂ ಸದಸ್ಯನ ವಿರುದ್ಧ ಬುಧವಾರ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುನ್ನೂರು ಗ್ರಾಪಂ ಸದಸ್ಯ ಬಾಬು ಶೆಟ್ಟಿ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ.

ಘಟನೆ ವಿವರ: ನಿವೇಶನ ರಹಿತ ಮಹಿಳೆಯೊಬ್ಬರು ಸೆ.18ರಂದು ಸೈಟ್‌ಗೆ ಅರ್ಜಿ ನೀಡಲೆಂದು ಮುನ್ನೂರು ಗ್ರಾಪಂಗೆ ತೆರಳಿದ್ದರು.

ಈ ವೇಳೆ ಆರೋಪಿ ಬಾಬು ಅವರನ್ನು ಅಧ್ಯಕ್ಷರ ಕೊಠಡಿಗೆ ಕರೆಸಿ ಕಿರುಕುಳ ನೀಡಿದ ಆರೋಪ ವ್ಯಕ್ತವಾಗಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಡಿವೈಎಫ್‌ಐ ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತ್ತು.

ಈ ಹಿನ್ನೆಲೆಯಲ್ಲಿ ಮಹಿಳೆ ಉಳ್ಳಾಲ ಠಾಣೆಯಲ್ಲಿ ಕೆಲವು ದಿನಗಳ ಬಳಿಕ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave A Reply