ಮೂಡುಬಿದಿರೆ: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಸಹಿತ ಅನ್ಯಕೋಮಿನ ಯುವತಿಯರನ್ನು ತಡೆದು ಅನೈತಿಕ ಪೊಲೀಸ್ ಗಿರಿ!!ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಇಬ್ಬರ ಬಂಧನ

ಮಂಗಳೂರು:ಅನ್ಯಮತೀಯ ಯುವಕ ಯುವತಿಯರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾರೆ ಎಂಬ ವಿಚಾರದಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣ ಮಂಗಳೂರು ಹೊರವಲಯದ ಮೂಡುಬಿದ್ರೆ ಯಲ್ಲಿ ನಡೆದಿದ್ದು, ಪ್ರಕರಣದ ಸಂಬಂಧ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಇಬ್ಬರನ್ನು ಬಂಧಿಸಲಾಗಿದೆ.

 

ಮೂಡುಬಿದ್ರೆಯ ಹೊರವಲಯದಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಇಬ್ಬರು ಅನ್ಯಮತೀಯ ಯುವತಿಯರೊಂದಿಗೆ ಕಾರಿನಲ್ಲಿ ಪ್ರಾಣಿಸುತ್ತಿದ್ದದನ್ನು ಕಂಡ ಎಂಟು ಜನರ ತಂಡವೊಂದು, ಕಾರನ್ನು ಅಡ್ಡಗಟ್ಟಿ ಪ್ರಶ್ನಿಸಿದ್ದು,ಕಾರಿನಲ್ಲಿದ್ದ ಮಹಿಳೆ ಹಾಗೂ ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆಂದು ದೂರಲಾಗಿದೆ.

ಈ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354,153,506 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಒಟ್ಟಾರೆಯಾಗಿ ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಇಂಥಹ ಪ್ರಕರಣಗಳು ಪದೇ ಪದೇ ಮರುಕಳಿಸುತ್ತಿದೆ.

Leave A Reply

Your email address will not be published.