ಡಿಕೆಶಿ ಕಲೆಕ್ಷನ್ ಗಿರಾಕಿ ಎಂದ ಕಾಂಗ್ರೆಸ್ ಮುಖಂಡರಾದ ವಿ.ಎಸ್.ಉಗ್ರಪ್ಪ,ಸಲೀಂ ಪಕ್ಷದಿಂದ ಉಚ್ಚಾಟನೆ
ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸಲೀಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದ್ದರೆ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ ಕೆಪಿಸಿಸಿ ವೇದಿಕೆಯಲ್ಲಿಯೇ ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಪಡೆದುಕೊಳ್ಳುವ ವಿಚಾರವಾಗಿ ಚರ್ಚೆ ನಡೆಸಿದ್ದರು. ಅಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಲೆಕ್ಷನ್ ಪಡೆದುಕೊಳ್ಳುತ್ತಿರುವ ಬಗ್ಗೆ ಆರೋಪಿಸಿ ಡಿಕೆಶಿ ಕಲೆಕ್ಷನ್ ಗಿರಾಕಿ ಎಂದು ಹೇಳಿದ್ದರು. ಪಕ್ಷದ ಅಧ್ಯಕ್ಷರ ವಿರುದ್ಧವೇ ಕಾಂಗ್ರೆಸ್ ನಾಯಕರ ಈ ಹೇಳಿಕೆಗಳು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತಲ್ಲದೇ ಆಡಳಿತ ಪಕ್ಷ ಬಿಜೆಪಿ ನಾಯಕರ ಕಟುಟೀಕೆಗಳಿಗೂ ಕಾರಣವಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಉಭಯ ನಾಯಕರ ವಿರುದ್ಧ ಕ್ರಮ ಕೈಗೊಂಡಿದ್ದು, ಸಲೀಂ ಅವರನ್ನು ಪಕ್ಷದಿಂದಲೇ ಉಚ್ಛಾಟನೆಗೊಳಿಸಿದ್ದರೆ, ವಿ.ಎಸ್. ಉಗ್ರಪ್ಪ ಅವರನ್ನು ಕಾಂಗ್ರೆಸ್ ನಿಂದಲೇ ಅಮಾನತುಗೊಳಿಸಲಾಗಿದೆ.
ಕಾಂಗ್ರೆಸ್ ತನ್ನ ಕಾರ್ಯಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ. ಆಂತರಿಕ ಪ್ರಜಾಸತ್ತೆಗಿಂತಲೂ ವ್ಯಕ್ತಿ ಪೂಜೆ ಮುಖ್ಯವಾಗಿದೆ.
ದಲಿತ ನಾಯಕ ಉಗ್ರಪ್ಪ ಮತ್ತು ಅಲ್ಪಸಂಖ್ಯಾತರಾದ ಸಲೀಂ ರವರ ಧ್ವನಿಯನ್ನು ಹತ್ತಿಕ್ಕಬೇಡಿ ಡೀಕೇಶಿಯವರೇ…