ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್)ಗೆ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಸಿಂಗ್ ಅವರು ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
88 ವರ್ಷದ ಮನಮೋಹನ್ ಸಿಂಗ್ ಅವರು ಕಳೆದ ಏಪ್ರಿಲ್ 19ರಂದು ಕೋವಿಡ್ ಪಾಸಿಟಿವ್ ಬಂದಿದ್ದು ಸೋಂಕಿನಿಂದ ಯಶಸ್ವಿಯಾಗಿ ಚೇತರಿಸಿಕೊಂಡು ಏಪ್ರಿಲ್ 29ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು.
You must log in to post a comment.