ಅ.15 : ಆರ್.ಎಸ್.ಎಸ್.ಜಿಲ್ಲಾ ನೂತನ ಕಾರ್ಯಾಲಯಕ್ಕೆ ಭೂಮಿ ಪೂಜೆ

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲೆಯ ನೂತನ ಕಾರ್ಯಾಲಯದ ಭೂಮಿ ಪೂಜನಾ ಕಾರ್ಯಕ್ರಮ ಅ.15ರಂದು ಬೆಳಿಗ್ಗೆ 9.15ಕ್ಕೆ ನಡೆಯಲಿದೆ.

ಪುತ್ತೂರಿನ ಹಳೇ ಆರಕ್ಷಕ ವಸತಿ ನಿಲಯ ರಸ್ತೆಯಲ್ಲಿರುವ ‘ಪಂಚವಟಿ’ಯಲ್ಲಿ ಕಾರ್ಯಕ್ರಮ ಜರಗಲಿದೆ. 95 ವರುಷಗಳ ಇತಿಹಾಸ ಇರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಕಛೇರಿ ‘ಪಂಚವಟಿ’ ಹಲವಾರು ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಸಂಘದ ಕಾರ್ಯ ಚಟುವಟಿಕೆಗಾಗಿ ಇನ್ನೂ ಹೆಚ್ಚಿನ ಸ್ಥಳಾವಕಾಶದ ಅವಶ್ಯಕತೆ ಇರುವುದರಿಂದ ನೂತನ ಕಟ್ಟಡ ನಿರ್ಮಾಣವಾಗಲಿದೆ.


Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕೇಶವ ಸ್ಮೃತಿ ಸಂವರ್ಧನ ಸಮಿತಿಯ ನೇತೃತ್ವದಲ್ಲಿ ಪಂಚವಟಿಯ ಭೂಮಿ ಪೂಜನಾ ಕಾರ್ಯಕ್ರಮ ನಡೆಯಲಿದ್ದು ಆರ್.ಎಸ್.ಎಸ್. ಜೈಷ್ಠ ಪ್ರಚಾರಕ ದಾ.ಮ. ರವೀಂದ್ರ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಪ್ರಾಂತ ಸಂಘ ಚಾಲಕ ಡಾ.ಪಿ.ವಾಮನ ಶೆಣೈ, ಪ್ರಾಂತ ಕಾರ್ಯಕಾರಿಣಿ ಆಮಂತ್ರಿತ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಕುಟುಂಬ ಪ್ರಬೋಧನ್ ವಿಭಾಗದ ಅಖಿಲ ಭಾರತೀಯ ಟೋಳಿ ಸದಸ್ಯ ಕಜಂಪಾಡಿ ಸುಬ್ರಹ್ಮಣ್ಯ ಭಟ್, ಪುತ್ತೂರು ಜಿಲ್ಲಾ ಸಂಚಾಲಕ ಕೊಹ್ಮಣ್ ಕಾಂತಪ್ಪ ಶೆಟ್ಟಿ ಸಹಿತ ಹಲವರು ಭಾಗವಹಿಸಲಿದ್ದಾರೆ.

ಬೆಳಿಗ್ಗೆ ಆರ್.ಎಸ್.ಎಸ್. ಪಥ ಸಂಚಲನ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಬೆಳಿಗ್ಗೆ 7.30ರಿಂದ ಪುತ್ತೂರು ನಗರ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ವಿಜಯ ದಶಮಿ ಪ್ರಯುಕ್ತ ಪಥಸಂಚಲನ ನಡೆಯಲಿದೆ.

error: Content is protected !!
Scroll to Top
%d bloggers like this: