ಶಿಮ್ಲಾದ ಪ್ರಸಿದ್ದ ದೇವಸ್ಥಾನದಲ್ಲಿ ಪ್ರವಾಸಿಗರ ದಾಂಧಲೆ, ಗಾಳಿಯಲ್ಲಿ ಗುಂಡು ಹಾರಿಸಿ ಅರ್ಚಕನ ಮೇಲೆ ಹಲ್ಲೆ.

ದುರ್ಗಾಷ್ಟಮಿಯ ಹಿನ್ನೆಲೆಯಲ್ಲಿ ಹತು ಮಾತಾ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಆಯೋಜನೆ ಮಾಡಲಾಗಿತ್ತು. ಹೀಗಾಗಿ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಲು,ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿದ್ದರು. ಈ ವೇಳೆ ಮಧ್ಯಾಹ್ನ 2:45 ರ ಸುಮಾರಿಗೆ ದೇವಸ್ಥಾನದ ಅರ್ಚಕ ಲಲಿತ್ ಶರ್ಮಾ ವಾಶ್‌ ರೂಮ್‌ಗೆ ಹೋದಾಗ ಇಬ್ಬರು ಪ್ರವಾಸಿಗರು ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನೋಡಿ, ಅವರನ್ನು ತಡೆಯಲು ಯತ್ನಿಸಿದ್ದಾರೆ. ಆದ್ರೆ ಅರ್ಚಕನ ಮಾತು ಕೇಳದ ಕಿಡಿಗೇಡಿಗಳು ಅರ್ಚಕನಿಗೆ ಕೊಲೆ ಬೆದರಿಕೆ ಹಾಕಿ ಬೆಟ್ಟದಿಂದ ಕೆಳಗೆ ಎಸೆಯುವ ಬೆದರಿಕೆ ಹಾಕಿದ್ದಾರೆ. ಕೊನೆಗೆ ಆರೋಪಿಗಳಿಂದ ತಪ್ಪಿಸಿಕೊಂಡ ದೇವಸ್ಥಾನದ ಅರ್ಚಕ ಕೂಡಲೇ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಇಬ್ಬರೂ ಆಗುಂತಕರು ಗಾಳಿಯಲ್ಲಿ ಗುಂಡು ಹಾರಿಸಿ ದೇವಸ್ಥಾನದಲ್ಲಿ ದಾಂದಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಅರ್ಚಕನ ಮಾತು ಕೇಳದ ಕಿಡಿಗೇಡಿಗಳು ಅರ್ಚಕನಿಗೆ ಕೊಲೆ ಬೆದರಿಕೆ ಹಾಕಿ ಬೆಟ್ಟದಿಂದ ಕೆಳಗೆ ಎಸೆಯುವ ಬೆದರಿಕೆ ಹಾಕಿದ್ದಾರೆ. ಕೊನೆಗೆ ಆರೋಪಿಗಳಿಂದ ತಪ್ಪಿಸಿಕೊಂಡ ದೇವಸ್ಥಾನದ ಅರ್ಚಕ ಕೂಡಲೇ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಇಬ್ಬರೂ ಆಗುಂತಕರು ಗಾಳಿಯಲ್ಲಿ ಗುಂಡು ಹಾರಿಸಿ ದೇವಸ್ಥಾನದಲ್ಲಿ ದಾಂದಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಬಳಿಕ ದೇವಸ್ಥಾನದ ಸಮಿತಿ ಹಲ್ಲೆ ನಡೆಸಿದ ಪ್ರವಾಸಿಗರ ಮೇಲೆ ದೂರು ನೀಡಿದ ಬಳಿಕ ಸ್ಥಳೀಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಭಿಷೇಕ್ ಕುಮಾರ್ ಮತ್ತು ಕುಲದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಇಬ್ಬರೂ ಆರೋಪಿಗಳು ಹರಿಯಾಣದ ಭಿವಾನಿ ಜಿಲ್ಲೆಯ ನಿವಾಸಿಗಳಾಗಿದ್ದು, ಓರ್ವ ಖಾಸಗಿ ಶಾಲೆಯ ನಿರ್ದೇಶಕರಾಗಿದ್ರೆ, ಇನ್ನೊಬ್ಬರು ಶಾಲೆಯ ಭದ್ರತಾ ಉಸ್ತುವಾರಿಯಲ್ಲಿ ಕೆಲಸ ಮಾಡುತ್ತಿದ್ದಾರೆ . ಸದ್ಯ ಬಂಧಿತ ಆರೋಪಿಗಳಿಂದ 1 ಪಿಸ್ತೂಲ್, ಒಂದು ಗನ್ ಮತ್ತು 12 ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುಂಡು ಹರಿಸಿದ ಕೂಡಲೇ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಆರೋಪಿಗಳು ತಪ್ಪಿಸಿಕೊಳ್ಳದಂತೆ ಸಕಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು, ಗಾಳಿಯಲ್ಲಿ ಗುಂಡು ಹಾರಿಸಿ ಅರ್ಚಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ಕಾರಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಸಣ್ಣಪುಟ್ಟ ಗಾಯಗಳಾಗಿರುವ ಅರ್ಚಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪೊಲೀಸರು ಚಿಕಿತ್ಸೆ ನೀಡಿಸಿದ್ದಾರೆ.

ಬಂಧಿತ ಆರೋಪಿಗಳು ಹರಿಯಾಣದಿಂದ 8 ಜನ ಪ್ರವಾಸಕ್ಕೆಂದು ಬಂದಿದ್ದರು. ಕುಡಿದ ಮತ್ತಿನಲ್ಲಿದ್ದ ಆರೋಪಿಗಳು ದೇವಸ್ಥಾನದಲ್ಲಿ ಭಕ್ತರ ಜೊತೆ ಅನುಚಿತವಾಗಿ ವರ್ತನೆ ಮಾಡುವುದರ ಜೊತೆಗೆ ಗಾಳಿಯಲ್ಲಿ ಗುಂಡು ಹಾರಿಸಿ ವಿಕೃತಿ ಮೆರೆದಿದ್ದಾರೆ. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ಅವರ ಜೊತೆಗಿರುವ ಶಸ್ತ್ರಾಸ್ತ್ರಗಳನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಬಂಧಿತ ಆರೋಪಿಗಳ ಜೊತೆಗೆ ಇರುವ ಉಳಿದ ಪ್ರವಾಸಿಗರ ವಿಚಾರಣೆ ಕೂಡ ನಡೆಯುತ್ತಿದೆ ಅಂತ ಪೊಲೀಸರು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.

Leave A Reply

Your email address will not be published.