ಮಂಗಳೂರು :ಲಾಡ್ಜ್‌‌ನಲ್ಲಿ ದಸರಾ ಪಾರ್ಟಿ ವೇಳೆ ಜಗಳ ,ಯುವಕನ ಕೊಲೆ

Share the Article

ಮಂಗಳೂರಿನ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.

ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ (20) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ.

ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೈಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್ ಎಂಬವರು ತೆರಳಿದ್ದಾರೆ.

ರಾತ್ರಿ 2 ಗಂಟೆಯ ಸುಮಾರಿಗೆ ಜೈಸನ್ ಸುರತ್ಕಲ್ ಮತ್ತು ಧನುಷ್ ಎಂಬವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೈಸನ್ ತನ್ನಲ್ಲಿರುವ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯಿಂದ ತೀವ್ರವಾಗಿ ಗಾಯಗೊಂಡ ಧನುಷ್‌ನನ್ನು ಇಂಡಿಯಾನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply